Slide
Slide
Slide
previous arrow
next arrow

ಕಾರ್ಮಿಕರ ಶ್ರಮಕ್ಕೆ ನ್ಯಾಯ, ಗೌರವ ದೊರೆಯಬೇಕು: ಎಂ ನಾರಾಯಣ್

300x250 AD

ಕಾರವಾರ: ದೇಶದಲ್ಲಿ ಸುಮಾರು 45 ಕೋಟಿಗೂ ಆಧಿಕ ಅಸಂಘಟಿತ ಕಾರ್ಮಿಕರಿದ್ದು, ಶ್ರಮಿಕ ವರ್ಗದಿಂದ ಮಾತ್ರ ದೇಶದ ಅಭಿವೃಧ್ದಿ ಸಾಧ್ಯವಾಗಲಿದ್ದು, ದೇಶದ ಅಭಿವೃಧ್ದಿಗೆ ಅತೀ ಹೆಚ್ಚಿನ ಕೊಡುಗೆ ನೀಡುತ್ತಿರುವ ಕಾರ್ಮಿಕರ ಶ್ರಮಕ್ಕೆ ನ್ಯಾಯ ಮತ್ತು ಗೌರವ ದೊರೆಯಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಹೇಳಿದರು.

ಅವರು ಬುಧವಾರ, ಸಾಯಿ ಮಂದಿರ ರಸ್ತೆಯಲ್ಲಿನ ಇಂದಿರಾಕಾಂತ ಸಭಾಭವನದಲ್ಲಿ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರುಗಳು, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ನ್ಯಾಯವಾದಿಗಳ ಸಂಘ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆ, ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಗುತ್ತಿಗೆದಾರರಿಗೆ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

300x250 AD

ಸಾರ್ವಜನಿಕರ ದೈನಂದಿನ ಚಟುವಟಿಕೆಗಳು ಸುಗಮವಾಗಿ ಸಾಗಲು ಪ್ರತೀ ಹಂತದಲ್ಲೂ ಕಾರ್ಮಿಕರ ಶ್ರಮ ಇದ್ದೇ ಇರುತ್ತದೆ. ಕಾರ್ಮಿಕರ ಅಭಿವೃಧ್ದಿಗಾಗಿ ಹಾಗೂ ಅವರ ಜೀವನಮಟ್ಟ ಸುಧಾರಣೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಎಲ್ಲಾ ಯೋಜನೆಗಳ ಬಗ್ಗೆ ಕಾರ್ಮಿಕ ಸಂಘಟನೆಗಳು ಕಾರ್ಮಿಕರಿಗೆ ಅರಿವು ಮೂಡಿಸಿ, ಅವುಗಳ ಪ್ರಯೋಜನವನ್ನು ಪ್ರತಿಯೊಬ್ಬ ಕಾರ್ಮಿಕರಿಗೆ ದೊರಕಿಸಬೇಕು ಎಂದರು.
ಕಾರ್ಮಿಕರನ್ನು ಕಂಪನಿಗಳು ಮತ್ತು ಮಾಲೀಕರು ಶೋಷಣೆಗೆ ಒಳಪಡಿಸದೇ ಅವರಿಗೆ ಸೇವಾ ಭದ್ರತೆ, ನ್ಯಾಯಯುತ ವೇತನ ಮತ್ತು ಭತ್ಯೆಗಳನ್ನು ಸಕಾಲದಲ್ಲಿ ನೀಡಿ, ಕೆಲಸ ನಿರ್ವಹಿಸುವ ಸ್ಥಳದಲ್ಲಿ ಉತ್ತಮ ಔದ್ಯೋಗಿಕ ವಾತಾವರಣ ನಿರ್ಮಿಸಬೇಕು, ಕಾರ್ಮಿಕರು ತಮ್ಮ ಸಮಸ್ಯೆಗಳನ್ನು ಪೊಲೀಸ್ ಇಲಾಖೆಯ ಉಚಿತ ಸಹಾಯವಾಣಿ ಸಂಖ್ಯೆ.112 ಗೆ ಅಥವಾ ಸಮೀಪದ ಪೊಲೀಸ್ ಠಾಣೆಗೆ ಭೇಟಿ ನೀಡಿ , ಮಾಹಿತಿ ನೀಡಿದಲ್ಲಿ ಈ ಬಗ್ಗೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಎಸ್ಪಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ ಎಮ್ ಮಾತನಾಡಿ, ರೈತರಂತೆ ಕಾರ್ಮಿಕರೂ ಸಹ ದೇಶದ ಬೆನ್ನೆಲುಬು ಆಗಿದ್ದು, ಯಾವುದೇ ಯೋಜನೆ ಯಶಸ್ವಿಯಾಗಿ ಕಾರ್ಯಗತವಾಗಬೇಕಾದಲ್ಲಿ ಕಾರ್ಮಿಕರು ಅತ್ಯಂತ ಅವಶ್ಯಕ. ಕಾರ್ಮಿಕರು ತಮಗಾಗಿ ಇರುವ ಯೋಜನೆಗಳು ಮತ್ತು ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಂಡಲ್ಲಿ ಸುರಕ್ಷಿತವಾಗಿ ಹಾಗೂ ನೆಮ್ಮದಿಯ ಜೀವನ ಸಾಗಿಸಲು ಸಾಧ್ಯವಿದೆ. ತಮ್ಮ ಮಕ್ಕಳನ್ನು ಬಾಲ ಕಾರ್ಮಿಕ ಪದ್ದತಿ ಮತ್ತು ಬಾಲ್ಯ ವಿವಾಹ ಪದ್ದತಿಗೆ ಒಳಗಾಗದಂತೆ ಎಚ್ಚರವಹಿಸಿ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ತಮ್ಮ ಹಕ್ಕು ಮತ್ತು ಸೌಲಭ್ಯಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದರು.
ಜಿಲ್ಲಾ ಕಾರ್ಮಿಕರ ಭವಿಷ್ಯ ನಿಧಿ ಅಧಿಕಾರಿ ಕುಮಾರ್ ಮಾತನಾಡಿ, ಕಾರ್ಮಿಕರ ಭವಿಷ್ಯ ನಿಧಿ ಯೋಜನೆಯ ಪ್ರಯೋಜನಗಳನ್ನು ವಿವರಿಸಿ, ಕಾರ್ಮಿಕರು ತಪ್ಪದೇ ಇ.ಪಿ.ಎಫ್ ಮಾಡಿಸಿಕೊಳ್ಳುವಂತೆ ಹಾಗೂ ಈ ಬಗ್ಗೆ ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ಸಂಪರ್ಕಿಸುವಂತೆ ತಿಳಿಸಿದರು.
ಪೌರಾಯುಕ್ತ ಜಗದೀಶ್ ಹುಲಗೆಜ್ಜಿ, ಸಂಪನ್ಮೂಲ ವ್ಯಕ್ತಿ ಪದ್ಮಾ ಕೆ ತಾಂಡೇಲ್, ಕಾರ್ಮಿಕ ಇಲಾಖೆಯ ನಿರೀಕ್ಷಕರುಗಳು ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ನೀಡುವ ವಿವಿಧ ಸೌಲಭ್ಯಗಳನ್ನು ಹಾಗೂ ಕಿಟ್ ಗಳನ್ನು ವಿತರಿಸಲಾಯಿತು. ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಲಾಯಿತು.

Share This
300x250 AD
300x250 AD
300x250 AD
Back to top