ಕಾರವಾರ: ಜಿಲ್ಲಾ ಪಂಚಾಯತ್‌ನಿಂದ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾ ಮಟ್ಟದ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಗೆ ಸೆಪ್ಟೆಂಬರ್ ತಿಂಗಳಲ್ಲಿ ಭಾಜನರಾದ ಅಂಕೋಲಾ ತಾಲ್ಲೂಕಿನ ಅಚಿವೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿಠ್ಠಲ ವಾಸು ಬಾಂದಿ ಅವರಿಗೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಅವರು ಗುರುವಾರ ತಮ್ಮ ಕಚೇರಿಯಲ್ಲಿ ಪ್ರಮಾಣ ಪತ್ರ ವಿತರಿಸಿ ಗೌರವಿಸಿದರು.
ಪ್ರಶಸ್ತಿ ಪ್ರಮಾಣ ಪತ್ರ ವಿತರಣೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ಆಡಳಿತ ಶಾಖೆಯ ಉಪ ಕಾರ್ಯದರ್ಶಿ ನಾಗೇಶ ರಾಯ್ಕರ, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ, ಸಹಾಯಕ ಕಾರ್ಯದರ್ಶಿ ಸುನಿಲ ನಾಯ್ಕ, ಆರ್‌ಡಬ್ಲ್ಯುಎಸ್‌ನ ಇಇ, ಎಇಇ ಉಪಸ್ಥಿತರಿದ್ದರು.
ವಿಠ್ಠಲ ಬಾಂದಿರವರಿಗೆ ಪಿಡಿಒ ಆಫ್ ದಿ ಮಂತ್ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ
