Slide
Slide
Slide
previous arrow
next arrow

ದಾಂಡೇಲಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ

300x250 AD

ಗಮನ ಸೆಳೆದ ಕಾಂತಾರ ಖ್ಯಾತಿಯ ಮಾನಸಿ ಸುಧೀರ ನೇತೃತ್ವದ ಸಾಂಸ್ಕೃತಿಕ ಕಾರ್ಯಕ್ರಮ

ದಾಂಡೇಲಿ : ದಾಂಡೇಲಿ ನವರಾತ್ರಿ ಉತ್ಸವ ಸಮಿತಿಯ ಆಶ್ರಯದಲ್ಲಿ ಹಳೆ ನಗರಸಭೆಯ ಮೈದಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವವು ವಿಜೃಂಭಣೆಯಿಂದ ನಡೆಯುತ್ತಿದೆ.

ಕಾಂತಾರ ಖ್ಯಾತಿಯ ಮಾನಸಿ ಸುಧೀರ್ ಅವರ ನೃತ್ಯನಿಕೇತನ ಕೊಡವೂರು ಕಲಾತಂಡದಿಂದ ನಡೆದ ನಾರಸಿಂಹ ನೃತ್ಯರೂಪಕ ಕಾರ್ಯಕ್ರಮವು ಅಪಾರ ಜನಾಕರ್ಷಣೆಗೆ ಪಾತ್ರವಾಯಿತು. ಧಾರ್ಮಿಕ ಜಾಗೃತಿಯ ಜೊತೆಗೆ ಮಾನವೀಯ ಮೌಲ್ಯಗಳ ಹೊತ್ತ ಸಂದೇಶವು ಇವರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಡಕವಾಗಿದ್ದವು.

ಕಾರ್ಯಕ್ರಮದ ಕೊನೆಯಲ್ಲಿ ಸುಧೀರ ಹಾಗೂ ಮಾನಸಿ ಸುಧೀರ ಅವರನ್ನು ದಾಂಡೇಲಿ ನವರಾತ್ರಿ ಉತ್ಸವ ಸಮಿತಿಯ ಪರವಾಗಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಈ ನೃತ್ಯ ತಂಡದ ಎಲ್ಲಾ ಕಲಾವಿದರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪೊಲೀಸ್ ರಕ್ತ ನಿರೀಕ್ಷಕರಾದ ಭೀಮಣ್ಣ ಎಂ. ಸೂರಿ ದಂಪತಿಗಳನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾನಸಿ ಸುಧೀರ ಹಾಗೂ ಸುಧೀರ ಅವರು ಹಸಿರು ನಗರ ದಾಂಡೇಲಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಅನಂತ ವಂದನೆಗಳು. ಇಲ್ಲಿಯ ಪ್ರೇಕ್ಷಕರು ನೀಡಿದ ಪ್ರೋತ್ಸಾಹ, ದಾಂಡೇಲಿ ನವರಾತ್ರಿ ಉತ್ಸವ ಸಮಿತಿಯವರ ಸಹಕಾರ ಸದಾ ಸ್ಮರಣೀಯವಾಗಿದೆ. ಸರ್ವರ ಸಹಕಾರವಿದ್ದಾಗ ಕಲೆ ಮತ್ತು ಕಲಾವಿದ ಬೆಳೆಯಲು ಸಾಧ್ಯ ಎಂದರು.

300x250 AD

ಕಲಾವಿದರನ್ನು ಸನ್ಮಾನಿಸಿ ಮಾತನಾಡಿದ ನವರಾತ್ರಿ ಉತ್ಸವ ಸಮಿತಿಯ ಗೌರವಾಧ್ಯಕ್ಷರಾದ ಸುನೀಲ ಹೆಗಡೆಯವರು ನಮ್ಮ ದೇಶದ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಹಾಗೂ ಆಚಾರ ವಿಚಾಗಳನ್ನು ಸದಾ ಉಳಿಸಿ ಬೆಳೆಸಿಕೊಳ್ಳಲು ಇಂತಹ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿದೆ. ನವರಾತ್ರಿ ಉತ್ಸವವು ದೇವಿಯ ಆರಾಧನೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಆಯೋಜನೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ದಾಂಡೇಲಿ ನವರಾತ್ರಿ ಉತ್ಸವ ಸಮಿತಿಯ ಅಧ್ಯಕ್ಷರಾದ ಟಿ.ಎಸ್.ಬಾಲಮಣಿ, ಪ್ರಧಾನ ಕಾರ್ಯದರ್ಶಿ ನರೇಂದ್ರ ಚೌಹ್ವಾಣ್, ಖಜಾಂಚಿ ಅಶುತೋಷ ಕುಮಾರ್ ರಾಯ್, ಪ್ರಮುಖರುಗಳಾದ ಶ್ರೀಪತಿ ಭಟ್, ಸುವರ್ಣಾ ಸುನೀಲ ಹೆಗಡೆ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಿ.ಎನ್.ವಾಸರೆ ಅವರು ಕಲಾವಿದರನ್ನು ಪರಿಚಯಿಸಿದರು. ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಅವರು ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

Share This
300x250 AD
300x250 AD
300x250 AD
Back to top