Slide
Slide
Slide
previous arrow
next arrow

ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ: ಎಂ.ನಾರಾಯಣ

300x250 AD

ಕುಮಟಾ : ಮಾದಕ ವಸ್ತುಗಳ ಸೇವನೆಗೆ ಒಮ್ಮೆ ಒಳಗಾದರೆ, ಅದರಿಂದ ಹೊರಬರುವುದು ಕಷ್ಟ. ಇದು ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಉತ್ತರಕನ್ನಡದ ಎಸ್.ಪಿ. ನಾರಾಯಣ ಅಭಿಪ್ರಾಯಪಟ್ಟರು. ಅವರು ಕುಮಟಾದ ಡಾ. ಎ. ವಿ ಬಾಳಿಗಾ ಕಾಲೇಜಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಹದಿಹರೆಯದ ವಯಸ್ಸಿನವರು ಒಳಗಾಗುತ್ತಾರೆ. ಒಮ್ಮೆ ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಅದರಿಂದ ಹೊರಬರುವುದು ತುಂಬಾ ಕಷ್ಟ ಎಂಬುದನ್ನು ತಿಳಿಹೇಳಬೇಕಿದೆ ಎಂದ ಅವರು, ತಂಬಾಕು, ಡ್ರಗ್ಸ್‌, ಗಾಂಜಾ, ಅಫೀಮು ಮತ್ತಿತರವು ಮಾದಕ ವಸ್ತುಗಳಾಗಿವೆ. ಇವುಗಳ ಸೇವನೆಯಿಂದ ಮೆದುಳಿನಲ್ಲಿ ಅಸ್ಪಷ್ಟತೆ ಉಂಟಾಗುತ್ತದೆ. ತನ್ನ ಮೇಲೆ ನಿಯಂತ್ರಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದರು.

300x250 AD

ಈ ಸಂದರ್ಭದಲ್ಲಿ ಕುಮಟಾ ಸಿಪಿಐ ಯೋಗೇಶ, ಪಿ.ಎಸ್.ಐ ಮಂಜುನಾಥ ಗೌಡರ್, ರವಿ ಗುಡ್ಡಿ, ಕಾಲೇಜಿನ ಉಪನ್ಯಾಸಕರು ಹಾಗೂ ಇತರರು ಇದ್ದರು.

Share This
300x250 AD
300x250 AD
300x250 AD
Back to top