ಕಾರವಾರ: ಪೋಕ್ಸೊ ಕಾಯ್ದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಸಮಾಜಶಾಸ್ತ್ರ ಅಥವಾ ಮನೋವಿಜ್ಞಾನ ಅಥವಾ ಮಕ್ಕಳ ಅಭಿವೃದ್ಧಿ ಅಥವಾ ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು. ಪ್ರತಿ ಪ್ರಕರಣಕ್ಕೆ ರೂ.3,000 (ರೂಪಾಯಿ ಮೂರು ಸಾವಿರ) ಸಂಭಾವನೆ ನಿಗದಿಗೊಳಿಸಲಾಗಿದೆ. ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆ ಕೂಡ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ಮಾಡಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುತ್ತದೆ.
ಅರ್ಜಿಗಳನ್ನು ಪ್ರಮಾಣ ಪತ್ರಗಳೊಂದಿಗೆ ಅ.25 ರಂದು ಸಂಜೆ 5.30ರ ಒಳಗಾಗಿ ಶ್ರೀಮತಿ ಉಮಾ ನೇತಲಕರ ಕಟ್ಟಡ, 2ನೇ ಮಹಡಿ, ಹಬ್ಬುವಾಡಾ, ಕಾರವಾರ-581 306. ದೂ.ಸಂ:Tel:+9108382220182 ವಿಳಾಸಕ್ಕೆ ಸಲ್ಲಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.