ಹೊನ್ನಾವರ: ಶಕ್ತಿ ದೇವತೆ ಶ್ರೀ ಆದಿಶಕ್ತಿ ಜಗದಂಬಾ ದೇವಸ್ಥಾನದ ಸಭಾಭವನದಲ್ಲಿ 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ 90% ಕ್ಕಿಂತ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಜರುಗಿತು.
ಮಂಡ್ಯದ ನಾಗಮಂಗಲದ ಖ್ಯಾತ ಶಿಕ್ಷಣ ತಜ್ಞರಾದ ರಾಜೇಶ ಲಾರ್ಡ ಮಾತನಾಡಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪೊತ್ಸಾಹಿಸುವ ಕಾರ್ಯ ಮಾದರಿಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. 40 ಜನ ವಿದ್ಯಾರ್ಥಿಗಳಿಗೆ ಹಾಗೂ 20 ಜನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಮಹನೀಯರನ್ನು ಸನ್ಮಾನಿಸಲಾಯಿತು.
ಸಾಮಾಜಿಕ ಕಾರ್ಯಕರ್ತರಾದ ರಾಜೇಶ ಸಾಲೇಹಿತ್ತಲ್, ಅಶೋಕ ಸಾಲೆಹಿತ್ತಲ್, ಜನಾರ್ಧನ ಕಾಣಕೊಣಕರ್, ಗಜಾನನ ನಾಯ್ಕ ಮತ್ತಿತರರು ಇದ್ದರು. ದಸರಾ ಉತ್ಸವದ ಪ್ರಯುಕ್ತ ಶ್ರೀ ಆದಿಶಕ್ತಿ ಜಗದಂಬಾ ದೇವಿಯ ಸನ್ನಿಧಿಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳು, ಬೆಳ್ಳಿ ಪಲ್ಲಕ್ಕಿ ಉತ್ಸವ ಹಾಗೂ ಪ್ರತಿನಿತ್ಯ ಅನ್ನ ಸಂತರ್ಪಣಾ ಕಾರ್ಯಕ್ರಮಗಳು ನೆರವೇರಿದವು. ಕಳೆದ 15 ದಿನಗಳಿಂದ ದೇವಾಲಯಕ್ಕೆ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟನ ಅಧ್ಯಕ್ಷೆ ಜಯಶ್ರೀ ಗಂಗಾಧರ ನಾಯ್ಕ ಇವರು ವಹಿಸಿದ್ದರು.