ಕುಮಟಾ: ತಾಲ್ಲೂಕಿನ ನಾಡುಮಾಸ್ಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಶನಿವಾರ ಉದ್ಯೋಗ ಖಾತ್ರಿ ನಡಿಗೆ ಸಬಲತೆಯೆಡೆಗೆ ಅಭಿಯಾನ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯತ್ನ ನರೇಗಾ ಸಹಾಯಕ ನಿರ್ದೇಶಕ ವಿನಾಯಕ ,ಹಳ್ಳಿಗಳ ಅಭಿವೃದ್ಧಿಗೆ ಮಹಾತ್ಮ ಗಾಂಧೀ ನರೇಗಾ ಯೋಜನೆ ತುಂಬಾ ಸಹಕಾರಿಯಾಗಿದೆ. ಗ್ರಾಮ ಪಂಚಾಯತಿಗಳಿಂದ ಗ್ರಾಮೀಣ ಭಾಗದ ಅರ್ಹ ಪ್ರತಿ ಕುಟುಂಬಕ್ಕೂ ಉದ್ಯೋಗ ಚೀಟಿ ವಿತರಿಸಲಾಗಿದೆ. ನರೇಗಾ ಯೋಜನೆಯ ಪ್ರಯೋಜನವನ್ನು ಎಲ್ಲರೂ ಗ್ರಾಪಂಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವ ಮೂಲಕ ಪಡೆಯಬಹುದಾಗಿದೆ ಎಂದರು.
ನಂತರ ಜಿಲ್ಲಾ ಐಇಸಿ ಸಂಯೋಜಕ ಫಕೀರಪ್ಪ ತುಮ್ಮಣ್ಣನವರ ಹಾಗೂ ಗ್ರಾಪಂ ಅಧಿಕಾರಿಗಳು, ಸಿಬ್ಬಂದಿ ಗ್ರಾಮದಲ್ಲಿ ಸಂಚರಿಸಿ ಮನೆ ಮನೆಗೆ ಭೇಟಿನೀಡಿ ಗ್ರಾಮಸ್ಥರಿಗೆ ನರೇಗಾ ಮಾಹಿತಿಯುಳ್ಳ ಕರಪತ್ರ ವಿತರಿಸಿ, ಸ್ಮಾರ್ಟ್ ಫೋನ್ ಮೂಲಕ ಸ್ಕ್ಯಾನ್ ಮಾಡಿ ಬೇಡಿಕೆ ಸಲ್ಲಿಸುವ ಪ್ರಕ್ರಿಯೆ ಸೇರಿದಂತೆ ಮನರೇಗಾ ಯೋಜನೆಯ ಇನ್ನಿತರ ಮಾಹಿತಿ ಕುರಿತು ತಿಳಿಸಿ, ಗ್ರಾಮಸ್ಥರಿಂದ ಬೇಡಿಕೆ ಸಂಗ್ರಹಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಜನಪ್ರತಿನಿಧಿಗಳು, ಕಾರ್ಯದರ್ಶಿಗಳು, ಕ್ಲರ್ಕ್, ಡಿಇಒ, ಸ್ವಚ್ಛತಾಗಾರರು, ಮೇಟ್, ಎನ್ಆರ್ಎಲ್ಎಂ ಯೋಜನೆಯಡಿ ಕಾರ್ಯನಿರ್ವಹಿಸುವ ಸ್ವಸಹಾಯ ಗುಂಪುಗಳ ಮಹಿಳೆಯರು, ಆಶಾ, ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.