Slide
Slide
Slide
previous arrow
next arrow

ಜಿಲ್ಲೆಯ ಬೀಚ್ ಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ : ಸಚಿವ ಮಂಕಾಳ ವೈದ್ಯ

300x250 AD

ಕಾರವಾರ ಜಿಲ್ಲೆಯ ಎಲ್ಲಾ ಬೀಚ್‌ಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ, ಗರಿಷ್ಠ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಬೀಚ್‌ನಲ್ಲಿ ಯಾವುದೇ ಜೀವ ಹಾನಿ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಸೂಚನೆ ನೀಡಿದರು.

ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೀಚ್‌ಗಳಿಗೆ ಆಗಮಿಸುವ ಪ್ರವಾಸಿಗರಿಗೆ ಸಮುದ್ರದ ಅಪಾಯಗಳ ಬಗ್ಗೆ ತಿಳಿಸಿ, ಸುರಕ್ಷತಾ ಕ್ರಮಗಳ ಬಗ್ಗೆ ಬೀಚ್ ಜೀವ ರಕ್ಷಕರ ಮೂಲಕ ಜಾಗೃತಿ ಮುಡಿಸುವಂತೆ ತಿಳಿಸಿದ ಸಚಿವರು, ಎಲ್ಲಾ ಬೀಚ್‌ಗಳಿಗೆ ಅಗತ್ಯವಿರುವಷ್ಟು ಸಂಖ್ಯೆಯ ಜೀವ ರಕ್ಷಕರನ್ನು ಹಾಗೂ ಮೇಲ್ವಿಚಾರಕರನ್ನು ನೇಮಕ ಮಾಡುವಂತೆ ಮತ್ತು ಪ್ರವಾಸೋದ್ಯಮ ಇಲಾಖೆಗೂ ಸಹ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.
ಬೀಚ್‌ನಲ್ಲಿ ನೇಮಕ ಮಾಡುವ ಪ್ರತಿ ಜೀವ ರಕ್ಷಕರಿಗೆ, ಅವರು ಬೀಚ್‌ನಲ್ಲಿ ಕಾರ್ಯನಿರ್ವಹಿಸಬೇಕಾದ ನಿರ್ದಿಷ್ಟ ಸ್ಥಳವನ್ನು ಹಂಚಿಕೆ ಮಾಡಿ ಆ ಪ್ರದೇಶದಲ್ಲಿ ಪ್ರವಾಸಿಗರಿಗೆ ಯಾವುದೇ ಅಪಾಯವಾಗದಂತೆ ನಿರಂತರವಾಗಿ ನಿಗಾ ವಹಿಸುವಂತೆ ಸೂಚನೆ ನೀಡಿ, ಅವರಿಗೆ ಸೂಕ್ತ ತರಬೇತಿ ಹಾಗೂ ಅಗತ್ಯವಿರುವ ಜೀವ ರಕ್ಷಣಾ ಸಾಮಗ್ರಿಗಳನ್ನು ಮತ್ತು ಸಮವಸ್ತçವನ್ನು ಒದಗಿಸುವಂತೆ ತಿಳಿಸಿದ ಸಚಿವರು ಬೀಚ್‌ನಲ್ಲಿ ಪೊಲೀಸ್ ಸಿಬ್ಬಂದಿಯನ್ನು ಸಹ ನಿಯೋಜಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿನ ಅನಧಿಕೃತ ಹೋಮ್ ಸ್ಟೇಗಳ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ, ಪ್ರಸ್ತುತ ಸರ್ಕಾರದ ಮಾರ್ಗಸೂಚಿಯಂತೆ ಅನುಮತಿ ಪಡೆದು ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಹೋಮ್ ಸ್ಟೇ ಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಹಾಗೂ ಅನಧಿಕೃತ ಎಂದು ಕಂಡು ಬರುವ ಹೋಮ್ ಸ್ಟೇ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಶರಾವತಿ ನದಿ ತೀರದ ಹೊನ್ನಾವರದಲ್ಲಿ ಬೋಟಿಂಗ್ ಚಟುವಟಿಕೆಗಳ ಬಗ್ಗೆ ಸೇಫ್ಟಿ ಆಡಿಟ್ ನಡೆಸುವಂತೆ ತಿಳಿಸಿದ ಸಚಿವರು, ಜಿಲ್ಲೆಯಲ್ಲಿ ಹೊಸ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅನುಮತಿ ನೀಡುವ ಮುನ್ನ ಕಡ್ಡಾಯವಾಗಿ ಜಿಲ್ಲಾಧಿಕಾರಿ ಅಧ್ಯಕ್ಷತೆ ಸಭೆಯಲ್ಲಿ ಪರಿಶೀಲಿಸಿ ಅನುಮತಿ ನೀಡುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಅಗತ್ಯವಿರುವ ಎಲ್ಲಾ ಪೂರಕ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದ ಸಚಿವರು, ಸಿ.ಆರ್.ಝಡ್ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನೂ ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಜನತೆಯ ಮತ್ತು ಮೀನುಗಾರರ ಅಭಿವೃದ್ಧಿಗೆ ಪೂರಕವಾದಂತಹ ಪ್ರವಾಸೋದ್ಯಮ ಚಟುವಟಿಕೆಗಳಿಗೆ ನಿರಂತರ ಪ್ರೋತ್ಸಾಹ ಮತ್ತು ಬೆಂಬಲ ನೀಡಲಾಗುವುದು. ಜಿಲ್ಲೆಗೆ ಅಂತರಾಷ್ಟ್ರೀಯ ಪ್ರವಾಸಿಗರು ಆಗಮಿಸಲು ಅನುಕೂಲವಾಗುವಂತೆ ಮುರುಡೇಶ್ವರÀದಲ್ಲಿ 360 ಕೋಟಿ ರೂ ವೆಚ್ಚದಲ್ಲಿ ಬಂದರು ನಿರ್ಮಾಣ ಮಾಡಲಾಗುವುದು, ಇದರಿಂದ ಕ್ರೂಸ್‌ಗಳ ಮೂಲಕ ಪ್ರವಾಸಿಗರು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ಆಗಮಿಸಲು ಸಾಧ್ಯವಾಗಲಿದೆ ಎಂದರು.

300x250 AD

ಸಭೆಯಲ್ಲಿ ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಹಾಗೂ ಕಾರವಾರ ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್, ಡಿ.ಎಫ್.ಓ. ರವಿಶಂಕರ್, ಉಪ ವಿಭಾಗಾಧಿಕಾರಿಗಳಾದ ಕನಿಷ್ಕ, ಕಾವ್ಯಾರಾಣಿ, ಡಾ.ನಯನಾ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಜಯಂತ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top