Slide
Slide
Slide
previous arrow
next arrow

6 ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ

300x250 AD

ಕಾರವಾರ; ಜಿಲ್ಲೆಯಲ್ಲಿ ಅ.21 ರಿಂದ ನ.20ರ ರವರೆಗೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 6 ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, 3,40,055 ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.

4-5 ತಿಂಗಳ ಮೇಲ್ಪಟ್ಟ ಎಲ್ಲಾ ದನ ಮತ್ತು ಎಮ್ಮೆಗಳಿಗೆ ಕಾಲು ಬಾಯಿ ಜ್ವರದ ಲಸಿಕೆಯನ್ನು ಉಚಿತವಾಗಿ ಪ್ರತಿ ಆರು ತಿಂಗಳುಗಳಿಗೊಮ್ಮೆ ಹಾಕಲಾಗುವುದು. ಜಿಲ್ಲೆಯ ಎಲ್ಲಾ 1289 ಗ್ರಾಮಗಳಲ್ಲಿ ರೈತರ ಮನೆ ಬಾಗಿಲಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕೆ ಹಾಕಲಾಗುವುದು. ಪ್ರತಿ 50-80 ಜಾನುವಾರುಗಳಿಗೆ ಒಂದು ಬ್ಲಾಕ್‌ನಂತೆ ಒಟ್ಟು ಜಿಲ್ಲೆಯಲ್ಲಿ 5138 ಬ್ಲಾಕ್‌ಗಳನ್ನು ರಚಿಸಲಾಗಿದೆ. 235 ಲಸಿಕೆದಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಪ್ರತಿ ಜಾನುವಾರುಗಳಿಗೆ ಪ್ರತ್ಯೇಕ ಸಿರಿಂಜ್ ಮತ್ತು ಸೂಜಿಯನ್ನು ಬಳಸಲಾಗುವುದು.
ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಬೇಕಾಗುವ 3,40,100 ಡೋಸ್‌ಗಳ ಕಾಲುಬಾಯಿ ಜ್ವರದ ಲಸಿಕೆ ದಾಸ್ತಾನ ಇದ್ದು, ಕಾರ್ಯಕ್ರಮಕ್ಕೆ ಅವಶ್ಯವಿರುವ ಲಸಿಕೆಯನ್ನು ಶಿರಸಿ, ಹಳಿಯಾಳ, ಕುಮಟಾ, ಕಾರವಾರ, ಯಲ್ಲಾಪುರ ತಾಲೂಕಿನಲ್ಲಿ ತಲಾ 1 ರಂತೆ ಒಟ್ಟು 5 ವಾಕ್ ಇನ ಕೂಲರ್‌ನಲ್ಲಿ ದಾಸ್ತಾನು ಇಡಲಾಗಿದೆ, ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿರುವ 30 ಐಸ್ ಲೈನ್ ರೆಪ್ರೀಜೇಟರಗಳಿಗೆ ಐಸ್ ಕೋಲ್ಡ ವಾಹನದಲ್ಲಿ ಸಾಗಾಣಿಕೆ ಮಾಡಲಾಗುವುದು. ಸದರಿ ಕಾರ್ಯಕ್ರಮದ ಜೊತೆಗೆ ರೈತರ ಮನೆಯಲ್ಲಿರುವ ನಾಯಿ ಹಾಗೂ ಬೆಕ್ಕುಗಳಿಗೆ ರೇಬೀಸ್ ರೋಗದ ಲಸಿಕೆಯನ್ನು ಉಚಿತವಾಗಿ ಹಾಕಲಾಗುವುದು. ರೈತರು ಈ ಕಾರ್ಯಕ್ರಮದ ಪ್ರಯೋಜನ ಪಡೆದು ತಮ್ಮ ಎಲ್ಲಾ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕೆಯನ್ನು ಹಾಗೂ ನಾಯಿ / ಬೆಕ್ಕುಗಳಿಗೆ ರೇಬೀಸ್ ರೋಗದ ಲಸಿಕೆಯನ್ನು ಹಾಕಿಸಿಕೊಳ್ಳಲು ಪಶುಪಾಲನೆ ಮತ್ತು ಪಶುವೈದ್ಯ ಸೇವೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top