Slide
Slide
Slide
previous arrow
next arrow

ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಡಿಸಿ ಕೆ.ಲಕ್ಷ್ಮಿಪ್ರಿಯ

300x250 AD

ಕಾರವಾರ: ಜಿಲ್ಲೆಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ನಿರ್ದೇಶನ ನೀಡಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಮತ್ತು ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ವಿವಿಧ ಅಧಿಕಾರಿಗಳ ನೇತೃತ್ವದ ಉಪ ಸಮಿತಿಗಳನ್ನು ರಚಿಸಿದ ಅವರು, ಎಲ್ಲಾ ಉಪ ಸಮಿತಿಗಳು ತಮಗೆ ನೀಡಲಾದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸ್ವಾಗತ, ಮೆರವಣಿಗೆ, ಸ್ತಬ್ಧಚಿತ್ರ, ಧ್ಜಜಾರೋಹಣ, ವೇದಿಕೆ, ಪಥಸಂಚಲನ, ಸಾಂಸ್ಕೃತಿಕ, ಬಹುಮಾನ ವಿತರಣೆ ಕುರಿತ ವಿವಿಧ ಉಪ ಸಮಿತಿಗಳ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಪೊಲೀಸ್ ಪರೇಡ್ ಮೈದಾನದವರೆಗೆ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆಯನ್ನು ವಿವಿಧ ಕಲಾತಂಡಗಳೊಂದಿಗೆ ಅದ್ದೂರಿಯಾಗಿ ಏರ್ಪಡಿಸಬೇಕು. ಮೆರವಣಿಗೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್, ಕೃಷಿ, ತೋಟಗಾರಿಕೆ, ಅರಣ್ಯ, ಮೀನುಗಾರಿಗೆ, ಬಂದರು ಇಲಾಖೆ ಮತ್ತು ನಗರಸಭೆ ವತಿಯಿಂದ ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ಕ್ರಮಕೈಗೊಳ್ಳುವಂತೆ ಸೂಚಿಸಿದರು.
ರಾಜ್ಯೋತ್ಸವ ಪ್ರಯುಕ್ತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವಂತೆ ಹಾಗೂ ಪೊಲೀಸ್ ಕವಾಯತು ಮೈದಾನದಲ್ಲಿ ಧ್ವಜಾರೋಹಣ ಮತ್ತು ಪಥ ಸಂಚಲನ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಮೆರವಣಿಗೆಯಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಪೊಲೀಸ್, ಎನ್.ಸಿ.ಸಿ, ಗೃಹ ರಕ್ಷಕ ದಳ ಸೇರಿದಂತೆ ಎಲ್ಲರೂ ಪಾಲ್ಗೊಳ್ಳುವಂತೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು,ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು .
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಕನಿಷ್ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ನಾಯ್ಕ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top