ಬನವಾಸಿ : ಇಲ್ಲಿನ ನಾಮದೇವ ಕಲ್ಯಾಣ ಮಂಟಪದಲ್ಲಿ ನ. 22 ರಿಂದ ನ.29ರ ವರೆಗೆ 1889ನೇ ಮದ್ಯ ವರ್ಜನ ಶಿಬಿರ ನಡೆಯಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ. ಜಿಲ್ಲಾ ಜನಜಾಗೃತಿ ವೇದಿಕೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬನವಾಸಿ ವಲಯ, ನವಜೀವನ ಸಮಿತಿ, ಶೌರ್ಯ ವಿಪತ್ತು ನಿರ್ವಹಣಾ ಘಟಕ, ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಈ ಮದ್ಯವರ್ಜನ ಶಿಬಿರ ನಡೆಯಲಿದೆ.
ನ. 22ರಂದು ಬೆಳಗ್ಗೆ 10.30ಕ್ಕೆ ಬನವಾಸಿ ಪಿಎಸ್ಐ ಚಂದ್ರಕಲಾ ಪತ್ತಾರ ಉದ್ಘಾಟಿಸುವರು. ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಗಜಾನನ ಗೌಡ ಅಧ್ಯಕ್ಷತೆವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ನಿರ್ದೇಶಕ ಎ. ಬಾಬು ನಾಯ್ಕ್, ಜಿಲ್ಲಾ ಜನಜಾಗೃತಿ ಅಧ್ಯಕ್ಷ ಕಾಳಿಂಗರಾಜ್, ಗ್ರಾಪಂ ಮಾಜಿ ಅಧ್ಯಕ್ಷ ಗಣೇಶ ಸಣ್ಣಲಿಂಗಣ್ಣನವರ, ಗ್ರಾಪಂ ಅಧ್ಯಕ್ಷೆ ಬೀಬಿ ಆಯಿಷಾ ಖಾನ್, ಮಾಜಿ ಎಪಿಎಮ್ ಸಿ ಅಧ್ಯಕ್ಷ ಶಿವಕುಮಾರ ಗೌಡ, ವೈದ್ಯಾಧಿಕಾರಿ ಡಾ. ಜಯಶ್ರೀ ಹೆಗಡೆ, ಶಾಖಾಧಿಕಾರಿ ಯಾದವ್ ಬೋರ್ಕರ್, ಗೌರಿ ನಾಯ್ಕ್, ಉಪಸ್ಥಿತರಿರುವರು.
ನ.29ರಂದು ಮಧ್ಯಾಹ್ನ 12.30ಕ್ಕೆ ಶಿಬಿರದ ಸಮಾರೋಪ ಸಮಾರಂಭ ನಡೆಯಲಿದೆ. ಶಾಸಕ ಶಿವರಾಮ ಹೆಬ್ಬಾರ ಉದ್ಘಾಟಿಸುವರು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಗಜಾನನ ಗೌಡ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡ, ತಾಲ್ಲೂಕು ದಂಡಾಧಿಕಾರಿ ಶ್ರೀಧರ ಮುಂದಲಮನಿ, ಶ್ರೀ ಸತ್ಯಸಾಯಿ ಲೋಕಸೇವಾ ಸಂಸ್ಥೆಯ ಮುಖ್ಯಸ್ಥ ಶಿವಪ್ರಸಾದ ಭಟ್, ರಾಜಶೇಖರ ಒಡೆಯರ್, ಸಿದ್ಧಲಿಂಗೇಶ ನರೆಗಲ್, ಮಧುಕರ ಮಾಳವದೆ, ಕಾಳಿಂಗ್ ರಾಜ್, ರಾಜ್ಯ ಜನಜಾಗೃತಿ ವೇದಿಕೆ ನಿರ್ದೇಶಕ ವಿವೇಕ ವಿನ್ಸೆಂಟ್ ಪಾಯಸ್, ಬಾಬು ನಾಯ್ಕ್, ಗೌರಿ ನಾಯ್ಕ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಯೋಜನಾಧಿಕಾರಿ ರಾಘವೇಂದ್ರ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.