ಕುಮಟಾ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಪನಿರ್ದೆಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾರವಾರ, ಉತ್ತರ ಕನ್ನಡ ಹಾಗೂ ಬಿ. ಕೆ. ಭಂಡಾರಕರ್ಸ ಸರಸ್ವತಿ ಪದವಿಪೂರ್ವ ಕಾಲೇಜು, ಕುಮಟಾ (ಉ.ಕ.) ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಶಾಲಾ ಶಿಕ್ಷಣ ಇಲಾಖೆ (ಪ.ಪೂ.) ಹಂತದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧೆಗಳ ಉದ್ಘಾಟನಾ ಸಮಾರಂಭವು ಇಂದು ನ.22ರಂದು ಬಿ. ಕೆ. ಭಂಡಾರಕರ್ಸ ಸರಸ್ವತಿ ಪದವಿಪೂರ್ವ ಕಾಲೇಜು ಪ್ರಾಂಗಣದಲ್ಲಿ ನಡೆಯಲಿದೆ.
ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಉಪಸ್ಥಿತಿ ನೀಡಲಿದ್ದು, ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ದಿನಕರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆಡಳಿತ ಸುಧಾರಣಾ ಆಯೋಗ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಶಾಸಕ ಸತೀಶ್ ಸೈಲ್ ಉಪಸ್ಥಿತರಿರಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಶಿವರಾಮ್ ಹೆಬ್ಬಾರ್, ಭೀಮಣ್ಣ ನಾಯ್ಕ್, ವಿ.ಪ. ಶಾಸಕ ಎಸ್. ವಿ. ಸಂಕನೂರು, ಶಾಂತಾರಾಮ ಸಿದ್ದಿ, ಗಣಪತಿ ಉಳ್ವೇಕರ್, ಕಲಭಾಗ ಪಂಚಾಯತ್ ಅಧ್ಯಕ್ಷ ಮಂಜುನಾಥ ನಾಯ್ಕ, ಸದಸ್ಯೆ ಶ್ರೀಮತಿ ರೂಪಾ ಭಂಡಾರಿ, ಶ್ರೀಮತಿ ಮಂಜುಳಾ ಮುಕ್ರಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜಪ್ಪ ಕೆ., ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ವಿಠ್ಠಲ ಆರ್. ನಾಯಕ, ಉತ್ತರ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಅಧ್ಯಕ್ಷ ಸತೀಶ್ ನಾಯ್ಕ್, ವಿಧಾತ್ರಿ ಅಕಾಡೆಮಿ ಸಹ ಸಂಸ್ಥಾಪಕ ಗುರುರಾಜ ಶೆಟ್ಟಿ, ಆಗಮಿಸಲಿದ್ದಾರೆ.