ದಾಂಡೇಲಿ : ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆಯು ಶುಕ್ರವಾರ ಜರುಗಿತು.
ಸಭೆಯಲ್ಲಿ ಸಾರ್ವಜನಿಕ ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯ ಬಗ್ಗೆ ಚರ್ಚೆ ನಡೆಯಿತು. ನೂತನವಾಗಿ ಆರಂಭಗೊಂಡ ರಕ್ತ ನಿಧಿ ಕೇಂದ್ರದ ನಿರ್ವಹಣೆ ಹಾಗೂ ಇನ್ನಿತರ ವಿಷಯಗಳ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಯಿತು.
ತಾಲೂಕು ಆರೋಗ್ಯ ವೈದ್ಯಾಧಿಕಾರಿ ಹಾಗೂ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿರುವ ಡಾ.ಅನಿಲ್ ಕುಮಾರ್ ನಾಯ್ಕ ಅವರು ಸಾರ್ವಜನಿಕ ಆಸ್ಪತ್ರೆಯ ಬಗ್ಗೆ ಹಾಗೂ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅಖಿಲ್ ಕಿತ್ತೂರು ಅವರು ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯ ಕಾರ್ಯಚಟುವಟಿಕೆಗಳ ಕುರಿತಂತೆ ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ, ಪೌರಾಯುಕ್ತರಾದ ಆರ್.ಎಸ್.ಪವಾರ್, ಸಮಿತಿಯ ಸದಸ್ಯರುಗಳಾದ ಮಸ್ತಾನಸಾಬ್ ಅತ್ತಾರ, ಪ್ರತಾಪ್ ಸಿಂಗ್ ರಜಪೂತ್, ರಫೀಕ್ ಖಾನ್, ಹಾಗೂ ಸಾರ್ವಜನಿಕ ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯ ವೈದ್ಯರು, ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.