Slide
Slide
Slide
previous arrow
next arrow

ಡಿ.1ರಂದು ಸಿದ್ದಾಪುರದಲ್ಲಿ ‘ಪ್ರತಿಬಿಂಬ’

300x250 AD

ವಿವಿಧ ಸ್ಪರ್ಧೆ: ಹವ್ಯಕ ಸಾಧಕರಿಗೆ ಸನ್ಮಾನ, ಯಕ್ಷಗಾನ‌ ಪ್ರದರ್ಶನ

ಸಿದ್ದಾಪುರ: ಸಿದ್ದಾಪುರ ಪ್ರಾಂತ್ಯದ ಹವ್ಯಕ ಪ್ರತಿಭೆಗಳಿಗಾಗಿ ಅಖಿಲ ಹವ್ಯಕ ಮಹಾಸಭಾ ವತಿಯಿಂದ ನಡೆಯುವ ಪ್ರತಿಬಿಂಬ ಕಾರ್ಯಕ್ರಮ ಡಿ. 1 ರಂದು ಬೆಳಗ್ಗೆ 9 ಘಂಟೆಯಿಂದ ಪಟ್ಟಣದ ಶಂಕರ ಮಠದಲ್ಲಿ ಆಯೋಜಿಸಲಾಗಿದೆ ಎಂದು ಹವ್ಯಕ ಮಹಾಸಭಾ ಉಪಾಧ್ಯಕ್ಷ ಆರ್.ಎಂ. ಹೆಗಡೆ ಬಾಳೇಸರ ಹೇಳಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 1943ರಲ್ಲಿ ಆರಂಭಗೊಂಡ ಅಖಿಲ ಹವ್ಯಕ ಮಹಾಸಭಾ ಕಳೆದ ಹತ್ತು ಹನ್ನೆರಡು ವರ್ಷಗಳಿಂದ ಪ್ರತಿಬಿಂಬ ಎನ್ನುವ ವಿನೂತನ ಕಾರ್ಯಕ್ರಮ ಆಯೋಜಿಸುತ್ತಿದೆ. ಹವ್ಯಕ ಮಕ್ಕಳಿಗೆ ಮತ್ತು ಮಹಿಳೆಯರಿಗಾಗಿ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಿ ಹವ್ಯಕ ಪ್ರತಿಭೆಗಳನ್ನು ಗುರುತಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇದರೊಂದಿಗೆ ಹವ್ಯಕ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುತ್ತಿದೆ. ಡಿ. 27, 28, 29 ರಂದು ಬೆಂಗಳೂರಿನಲ್ಲಿ ನಡೆಯುವ ವಿಶ್ವ ಹವ್ಯಕ ಸಮ್ಮೇಳನದ ಭಾಗವಾಗಿ ವಿವಿಧ ಪ್ರಾಂತ್ಯಗಳಲ್ಲಿ ಪ್ರತಿಬಿಂಬ ಕಾರ್ಯಕ್ರಮವನ್ನು ಏರ್ಪಡಿಸಿ ಸ್ಪರ್ಧೆಯಲ್ಲಿ ವಿಜೇತರಾದ ಪ್ರತಿಭೆಗಳನ್ನು ವಿಶ್ವ ಹವ್ಯಕ ಸಮ್ಮೇಳನಕ್ಕೆ ಆಹ್ವಾನಿಸಲಾಗುತ್ತದೆ. ಅದರಂತೆ ಪಟ್ಟಣದ ಶೃಂಗೇರಿ ಶಂಕರ ಮಠದಲ್ಲಿ ಡಿ. 1ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಪ್ರತಿಬಿಂಬ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶಾಸಕ ಭೀಮಣ್ಣ ಟಿ. ನಾಯ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಖಿಲ ಹವ್ಯಕ ಮಹಾಸಭಾ ಅಧ್ಯಕ್ಷ ಡಾ.ಗಿರಿಧರ್ ಕಜೆ ಅಧ್ಯಕ್ಷತೆ ವಹಿಸುವರು. ಶಿಕ್ಷಣ ಪ್ರಸಾರಕ ಸಮಿತಿಯ ಕಾರ್ಯಾಧ್ಯಕ್ಷ ಶಶಿಭೂಷಣ್ ಹೆಗಡೆ ದೊಡ್ಮನೆ, ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ರವಿ ಹೆಗಡೆ ಹೂವಿನ ಮನೆ, ಹಿರಿಯ ಸಾಮಾಜಿಕ ಕಾರ್ಯಕರ್ತ ಎಂ.ಎಲ್.ಭಟ್ ಉಂಚಳ್ಳಿ, ಲೋಕದ್ವನಿ ದೈನಿಕದ ಸಂಪಾದಕ ನಾಗರಾಜ ಹೆಗಡೆ ಮತ್ತಿಗಾರ್, ಟಿಎಸ್‌ಎಸ್ ನಿರ್ದೇಶಕ ರವೀಂದ್ರ ಹೆಗಡೆ ಹೀರೆಕೈ ಇತರರು ಉಪಸ್ಥಿತರಿರುತ್ತಾರೆ.

300x250 AD

ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಭಾಗವತ ಕೇಶವ ಹೆಗಡೆ ಕೊಳಗೆ ಅವರನ್ನು ಸನ್ಮಾನಿಸಲಾಗುವುದು. ಸಂಜೆ 4.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಶಿವರಾಮ ಹೆಬ್ಬಾರ್, ಶಂಕರ ಮಠದ ಧರ್ಮಾಧಿಕಾರಿ ವಿಜಯ ಹೆಗಡೆ ದೊಡ್ಮನೆ, ರಾಘವೇಂದ್ರ ಶಾಸ್ತ್ರಿ ಬಿಳಗಿ, ಆರ್. ಎಸ್. ಹೆಗಡೆ ಹರಿಗಿ, ಪ್ರಕಾಶ್ ಹೆಗಡೆ, ಶ್ರೀಧರ್ ಭಟ್ ಕೆಕ್ಕಾರು ಉಪಸ್ಥಿತರಿರುತ್ತಾರೆ. ಹವ್ಯಕ ಮಹಾಸಭಾ ಉಪಾಧ್ಯಕ್ಷ ಆರ್. ಎಂ. ಹೆಗಡೆ ಬಾಳೇಸರ ಅಧ್ಯಕ್ಷತೆ ವಹಿಸುವರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ತಾಲ್ಲೂಕಿನ ಹವ್ಯಕ ಸಾಧಕರನ್ನು ಸನ್ಮಾನಿಸಲಾಗುತ್ತದೆ. ಸಂಜೆ 6ರಿಂದ ‘ಧರ್ಮಾಂಗದ ದಿಗ್ವಿಜಯ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

ಪ್ರತಿಬಿಂಬ ಕಾರ್ಯಕ್ರಮದಲ್ಲಿ ಆರು ವರ್ಷದ ಒಳಗಿನ ಮಕ್ಕಳಿಗೆ ಶ್ಲೋಕ ಪಠಣ, ಛದ್ಮವೇಶ, ಚೆಂಡು ಎಸೆತ ಸ್ಪರ್ಧೆಗಳಿರುತ್ತವೆ. 7ರಿಂದ 12 ವರ್ಷದ ಮಕ್ಕಳಿಗೆ ಭಗವದ್ಗೀತಾ ಕಂಠಪಾಠ, ಚಿತ್ರಕಲೆ, ಏಕಪಾತ್ರ ಅಭಿನಯ ಮತ್ತು ಕೆರೆ ದಡ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. 13 ರಿಂದ 18 ವರ್ಷದ ಮಕ್ಕಳಿಗೆ ರಸಪ್ರಶ್ನೆ, ಆಶುಭಾಷಣ, ಭಾವಗೀತೆ, ಸಂಗೀತ ಕುರ್ಚಿ ಸ್ಪರ್ಧೆಗಳು ಇರಲಿವೆ. 18 ವರ್ಷ ಮೇಲ್ಪಟ್ಟವರಿಗೆ ಹವ್ಯಕ ಸಂಪ್ರದಾಯ ಗೀತೆ, ರಂಗೋಲಿ, ಜಾನಪದ ಗೀತೆ, ಪಾಯಸ ಕುಡಿಯುವುದು, ಹವಿ ರುಚಿ, ಆರತಿ ತಟ್ಟೆ ಸ್ಪರ್ಧೆಗಳು ಇರಲಿವೆ. ಕಾರ್ಯಕ್ರಮದಲ್ಲಿ ಬೆಳಗಿನ ಉಪಹಾರ, ಮಧ್ಯಾಹ್ನದ ಊಟ, ಸಂಜೆಯ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಸ್ಪರ್ಧೆಗೆ ಭಾಗವಹಿಸುವವರು ಜಿ ಜಿ ಹೆಗಡೆ ಬಾಳಗೋಡು –Tel:+919845793204 ಮತ್ತು ಗಣಪತಿ ಹೆಗಡೆ ಗುಂಜಗೋಡು–Tel:+919481915849 ಇವರನ್ನು ಸಂಪರ್ಕಿಸಬಹುದಾಗಿದೆ ಎಂದರು.
ಜಿ,ಜಿ ಹೆಗಡೆ ಬಾಳಗೋಡು, ಗಣೇಶ ಭಟ್ಟ ಕಾಜಿನಮನೆ, ಪರಮೇಶ್ವರ್ ಹೆಗಡೆ ಶಿರಗೋಡ ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top