ಹಳಿಯಾಳ : ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಹಳಿಯಾಳ ಪಟ್ಟಣದ ಕಾರ್ಮೆಲ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಹಳಿಯಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಗುರುವಾರ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆರ್.ವಿ.ದೇಶಪಾಂಡೆ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಅತ್ಯುತ್ತಮವಾದ ವೇದಿಕೆ. ವಿದ್ಯಾರ್ಥಿಗಳು ಈ ಕಾರ್ಯಕ್ರಮವನ್ನು ಸದ್ಬಳಕೆ ಮಾಡಿಕೊಂಡು ಜೀವನದಲ್ಲಿ ಉನ್ನತಿಯನ್ನು ಸಾಧಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಹಳಿಯಾಳ ಪುರಸಭೆಯ ಅಧ್ಯಕ್ಷೆ ದ್ರೌಪದಿ ಅಗಸರ, ಉಪಾಧ್ಯಕ್ಷೆ ಲಕ್ಷ್ಮೀ ವಡ್ಡರ, ತಹಶೀಲ್ದಾರ್ ಪ್ರವೀಣ್ ಹುಚ್ಚಣ್ಣನವರ ,ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ ಮಹಾಲೆ ಮೊದಲಾದವರು ಉಪಸ್ಥಿತರಿದ್ದರು.