Slide
Slide
Slide
previous arrow
next arrow

ಸಂವಿಧಾನ ಈ ದೇಶದ ಪ್ರತಿಯೊಬ್ಬ ಪ್ರಜೆಯ ಬಹು ಅಮೂಲ್ಯ ಗ್ರಂಥ: ಚಂದ್ರಕಾಂತ ನಡಿಗೇರ

300x250 AD

ದಾಂಡೇಲಿ : ಮಹಾ ನಾಯಕ ಡಾ. ಬಿ ಆರ್ ಅಂಬೇಡ್ಕರ್ ಸೇನೆ ಹಾಗೂ ಆದಿಜಾಂಬವಂತ ಸಂಘಟನೆಯಿಂದ ನಗರ ಸಭೆಯ ಆವರಣದಲ್ಲಿರುವ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಹತ್ತಿರ ಸಂವಿಧಾನ ದಿನಾಚರಣೆಯನ್ನು ಮಂಗಳವಾರ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆಯನ್ನು ಮಾಡಿ ಗೌರವ ನಮನಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಹಾ ನಾಯಕ ಡಾ.ಬಿ. ಆರ್.ಅಂಬೇಡ್ಕರ್ ಸೇನೆಯ ರಾಜ್ಯ ಉಪಾಧ್ಯಕ್ಷರು ಹಾಗೂ ಆದಿಜಾಂಬವಂತ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಚಂದ್ರಕಾಂತ ನಡಿಗೇರ ಅವರು ಪ್ರತಿಯೊಬ್ಬ ಭಾರತೀಯನೂ ನೆಮ್ಮದಿ ಹಾಗೂ ಸ್ವಾಭಿಮಾನದಿಂದ ಬದುಕು ನಡೆಸಬೇಕೆಂಬ ಆಶಯವನ್ನು ಹೊತ್ತ ಡಾ. ಬಿ.ಆರ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಈ ದೇಶದ ಪ್ರತಿಯೊಬ್ಬ ಪ್ರಜೆಯ ಬಹುಮೂಲ್ಯ ಗ್ರಂಥ ಮತ್ತು ಆಸ್ತಿ. ಪರಸ್ಪರ ಸೌಹಾರ್ದತೆಯ ಸಮಾಜ ನಿರ್ಮಾಣದ ದೃಢಸಂಕಲ್ಪವನ್ನು ತೊಟ್ಟಿದ್ದ ಅಂಬೇಡ್ಕರ್ ಅವರ ಆದರ್ಶಗಳನ್ನು ನಾವು ನೀವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಆದಿಜಾಂಬವಂತ ಸಂಘದ ತಾಲೂಕು ಅಧ್ಯಕ್ಷರಾದ ಸತೀಶ್ ಚೌಹ್ವಾಣ್ ಸಂವಿಧಾನ ಪೀಠಿಕೆಯನ್ನು ಓದಿದರು. ನಂತರ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು.

300x250 AD

ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ದಶರಥ ಬಂಡಿವಡ್ಡರ, ಮಹಾ ನಾಯಕ ಡಾ.ಬಿ.ಆರ್. ಅಂಬೇಡ್ಕರ್ ಸೇನೆಯ ಜಿಲ್ಲಾ ಉಪಾಧ್ಯಕ್ಷರಾದ ಸರಸ್ವತಿ ಚೌಹ್ವಾಣ್, ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ್ ಸೇನೆಯ ದಾಂಡೇಲಿ ಘಟಕದ ಅಧ್ಯಕ್ಷೆ ರೇಣುಕಾ ಮಾದರ ಹಾಗೂ ಸಂಘಟನೆಯ ಪ್ರಮುಖರುಗಳಾದ ದತ್ತು ಮಾಳಿಗೆ, ಹನುಮಂತ ಹರಿಜನ, ಯಶವಂತ, ಸದಾಶಿವ ಕಾಂಬಳೆ ಮತ್ತು ಸಂಘದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

ಮಹಾ ನಾಯಕ ಡಾ.ಬಿ.ಆರ್.ಅಂಬೇಡ್ಕರ್ ಸೇನೆಯ ದಾಂಡೇಲಿ ಘಟಕದ ಅಧ್ಯಕ್ಷೆ ರೇಣುಕಾ ಮಾದರ ಅವರು ಸರ್ವರನ್ನು ಸ್ವಾಗತಿಸಿ, ವಂದಿಸಿದರು.

Share This
300x250 AD
300x250 AD
300x250 AD
Back to top