Slide
Slide
Slide
previous arrow
next arrow

ಡಿ.2ರಿಂದ ಶಿರಸಿ-ಕುಮಟಾ ಹೆದ್ದಾರಿ ಬಂದ್: ಬದಲಿ ಮಾರ್ಗ ಬಳಸಲು ಡಿಸಿ ಆದೇಶ

300x250 AD

ಶಿರಸಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ರಾಷ್ಟ್ರೀಯ ಹೆದ್ದಾರಿ-766E ಕುಮಟಾ-ಶಿರಸಿ ರಸ್ತೆಯಲ್ಲಿ ಉನ್ನತೀಕರಣ ಕಾಮಗಾರಿಯನ್ನು ಡಿ:2ರಿಂದ ಪ್ರಾರಂಭಿಸಲಿದ್ದು, ಸದರಿ ಕಾಮಗಾರಿಯು ನಿಗದಿತ ಸಮಯದೊಳಗೆ ಮುಕ್ತಾಯಗೊಳಿಸಬೇಕಾಗಿರುವುದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಬಂದ್‌ ಮಾಡಿ ಬದಲಿ ಮಾರ್ಗ ಬಳಸುವಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.

ಫೆಬ್ರವರಿ 25, 2025 ರವರೆಗೆ ರಸ್ತೆ ಸಂಚಾರ ಬಂದ್ ಮಾಡಿ ಆದೇಶ ನೀಡಿದ್ದು, ಸಿದ್ದಾಪುರ ಎನ್ಎಚ್ 766 E ಮೂಲಕ ಲಘು ವಾಹನ ಸಂಚಾರಕ್ಕೆ ಅನುಮತಿಯನ್ನು ನೀಡಲಾಗಿದೆ. ಹಾಗೆಯೇ ಯಲ್ಲಾಪುರ ಎನ್ಎಚ್ 63 ಮೂಲಕ ಎಲ್ಲಾ ವಿಧದ ವಾಹನ ಸಂಚಾರಕ್ಕೆ ಮುಕ್ತ ಅವಕಾಶ ನೀಡಿದ್ದು, ಸಿದ್ದಾಪುರ-ಮಾವಿನಗುಂಡಿ ರಸ್ತೆ ಮೂಲಕ ಎಲ್ಲಾ ರೀತಿ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top