ಕಾರವಾರ: ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ಉತ್ತರಕನ್ನಡ ಜಿಲ್ಲೆ ಹಾಗೂ ಕರಾವಳಿ ಟ್ರೇನಿಂಗ್ ಇನ್ಸ್ಟಿಟ್ಯೂಟ್ ಕಾರವಾರ ಅವರ ಸಹಯೋಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಮತ್ತು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಗಿಡಕ್ಕೆ ನೀರುಣಿಸುವುದರ ಮೂಲಕ ಉದ್ಘಾಟಿಸಿದರು.
ಜಿಲ್ಲೆಯಲ್ಲಿ ಅನೇಕ ಪ್ರವಾಸಿ ತಾಣಗಳಿದ್ದು ಪ್ರತಿಯೊಂದು ತಾಣವು ಸಹ ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿದೆ, ಪ್ರವಾಸಿ ತಾಣಗಳ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಅದನ್ನು ನಾವು ನಿಷ್ಠೆಯಿಂದ ನಿರ್ವಹಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾಧಿಕಾರಿ ಎಂ.ಪಿ. ಮುಲೈ ಮುಹಿಲನ್, ನಗರಸಭೆ ಅಧ್ಯಕ್ಷರು, ಸದಸ್ಯರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರ ಹಾಗೂ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.