ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರಕರ್ಸ ಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ನ.29, ಶುಕ್ರವಾರದಂದು, ಕೊಂಕಣ ಎಜುಕೇಶನ್ ಟ್ರಸ್ಟ್ ನ ಸಹಕಾರ್ಯದರ್ಶಿಗಳಾದ ಶೇಷಗಿರಿ ಶಾನಭಾಗ ವಾಲಿಬಾಲ್ ಅನ್ನು ಸರ್ವ ಮಾಡುವ ಮೂಲಕ ಚಾಲನೆ ನೀಡಿ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಕೊಂಕಣ ಎಜುಕೇಶನ್ ಟ್ರಸ್ಟ್ ನ ವಿಶ್ವಸ್ಥರಾದ ರಾಮಕೃಷ್ಣ ಗೋಳಿ ಹಾಗೂ ರಾಮನಾಥ ಕಿಣಿ ವಿದ್ಯಾರ್ಥಿಗಳಿಗೆ ಹಸ್ತಲಾಘವ ಮಾಡಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಕಿರಣ ಭಟ್ಟ , ಉಪ ಪ್ರಾಂಶುಪಾಲರರಾದ ಸುಜಾತಾ ಹೆಗಡೆ, ಕ್ರೀಡಾ ಸಂಯೋಜಕರಾದ ದೀಪಕ ನಾಯ್ಕ, ಉಪನ್ಯಾಸಕರು, ಉಪನ್ಯಾಸಕರೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕರಾದ ಜಯರಾಜ ಶೇರುಗಾರ ಮತ್ತು ನಾಗರಾಜ ಭಂಡಾರಿ ಕ್ರೀಡಾಕೂಟವನ್ನು ನಡೆಸಲು ಸಹಕರಿಸಿದರು.