ಕುಮಟಾ: ಕೆ.ಎಲ್.ಇ ಪ್ರೇರಣಾ ಪದವಿ ಪೂರ್ವ ಕಾಲೇಜು, ಹುಬ್ಬಳ್ಳಿಯಲ್ಲಿ ನಡೆದ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮಿರ್ಜಾನಿನ ಆದಿಚುಂಚನಗಿರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ನಂದಿನಿ ನಾಗು ಗೌಡ ಇಂಗ್ಲಿಷ್ ಪ್ರಬಂಧದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾಳೆ. ಈ ಮೊದಲು ಹಿರೆಗುತ್ತಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದ ತಾಲೂಕ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಳು. ಇವಳ ಸಾಧನೆಗೆ ಆದಿಚುಂಚನಗಿರಿ ಸಂಸ್ಥಾನದ ಪೂಜ್ಯರಾದ ಬ್ರಹ್ಮಚಾರಿ ನಿಶ್ಚಲಾನಂದನಾಥ ಜಿ, ಆಡಳಿತ ಅಧಿಕಾರಿ ಜಿ. ಮಂಜುನಾಥ್, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.