Slide
Slide
Slide
previous arrow
next arrow

ಜಾನಪದ ತರಬೇತಿ ಶಿಬಿರ; ಅರ್ಜಿ ಆಹ್ವಾನ

300x250 AD

ಕಾರವಾರ: ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಇಲಾಖೆಯ ಪ್ರಮುಖ ಕಾರ್ಯಕ್ರಮವಾದ ಯುವಜನಮೇಳ ಹಾಗೂ ಯುವಜನೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉತ್ತೇಜಿಸುವ ಹಿತದೃಷ್ಠಿಯಿಂದ ಸದರಿ ಕಾರ್ಯಕ್ರಮ ಕೈಗೊಳ್ಳುವುದು ಸೂಕ್ತವಾಗಿರುವ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ಕಲಾ ಪ್ರಕಾರಗಳ ಜಾನಪದ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಯುವ ಜನರಿಗೆ ಕಲಾ ಪ್ರಕಾರಗಳ ತರಬೇತಿ ಶಿಬಿರವನ್ನು 50 ಶಿಬಿರಾರ್ಥಿಗಳಿಗೆ ಡಿ. 10 ರಿಂದ ಡಿ.17 ರವರೆಗೆ 8 ದಿನಗಳ ಕಾಲ ಆಯೋಜಿಸಲಾಗಿದ್ದು, ಆಸಕ್ತ ಪರಿಶಿಷ್ಟ ಜಾತಿ ಯುವಜನರು ಡಿ.7 ರೊಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾರವಾರ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಮೊಬೈಲ್ ಸಂಖ್ಯೆ: 9480886551 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.
ತರಬೇತಿ ನಡೆಯುವ ಸ್ಥಳ ಹಾಗೂ ಹೆಚ್ಚಿನ ವಿವರಗಳಿಗಾಗಿ ಸಹಾಯವಾಣಿ ಸಂಖ್ಯೆ: 155265 ಹಾಗೂ ಮೊಬೈಲ್ ಸಂಖ್ಯೆ:Tel:+919731251411 ನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top