ಹೊನ್ನಾವರ: ತಾಲೂಕಿನ ಆಯ್ದ ಐದು ಮಂದಿ ಶಿಕ್ಷಕರಿಗೆ ರೋಟರಿ ಕ್ಲಬ್ ಹೊನ್ನಾವರ ಇದರ ವತಿಯಿಂದ ನೇಷನ್ ಬಿಲ್ಡರ್ ಅವಾರ್ಡ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ನಿವೃತ್ತ ಪ್ರಾಚಾರ್ಯೆ ಡಾ. ವಿಜಯಲಕ್ಷ್ಮಿ ನಾಯ್ಕ ಮಾತನಾಡಿ ರೋಟರಿ ಕ್ಲಬ್ ಹೊನ್ನಾವರ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ಪಾಲಕರು ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಅತೀವ ಕಾಳಜಿಯನ್ನು ವಹಿಸುತ್ತಿದ್ದು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.
ಕೆನರಾ ಬ್ಯಾಂಕ್ ವ್ಯವಸ್ಥಾಪಕರಾದ ಅರ್ಚನಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ತಾಲೂಕಿನ ಆಯ್ದ ಐದು ಮಂದಿ ಶಿಕ್ಷಕರಿಗೆ ನೇಷನ್ ಬಿಲ್ಡರ್ ಅವಾರ್ಡ್ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಶಿಕ್ಷಕ ದಿನಾಚರಣೆಯ ಅಂಗವಾಗಿ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ ನಡೆಸಿದ ಆನ್ಲೈನ್ ಭಾಷಣ ಸ್ಪರ್ಧೆಯ ವಿಜೇತರಿಗೆ ಇದೇ ವೇಳೆ ಬಹುಮಾನ ವಿತರಣೆ ಜರುಗಿತು. ಮಕ್ಕಳ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಹೊನ್ನಾವರ ಮತ್ತು ಕೆನರಾ ಬ್ಯಾಂಕ್ ಸಹಯೋಗದೊಂದಿಗೆ ತಾಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸಿದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ರೋಟರಿ ಅಧ್ಯಕ್ಷ ಸೂರ್ಯಕಾಂತ ಸಾರಂಗ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಯೋಜಕರಾದ ಜಿ ಟಿ ಹೆಬ್ಬಾರ್, ವಿ.ಜಿ.ನಾಯ್ಕ, ಮಹೇಶ್ ಕಲ್ಯಾಣಪುರ,ಸ್ಟೀಪನ್ ರೊಡ್ರಗೀಸ್, ಮಂಜುಳಾ ಗುರುರಾಜ ಮತ್ತು ಎಸ್. ಎನ್. ಹೆಗಡೆ ರೋಟರಿ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಎಂ.ಎಂ. ಹೆಗಡೆ ವಂದಿಸಿದರು. ದಿನೇಶ ಕಾಮತ್ ನಿರೂಪಿಸಿದರು.