Slide
Slide
Slide
previous arrow
next arrow

ಕೃಷಿ ಯೋಜನೆಗಳ ಸೌಲಭ್ಯ: ರೈತರಿಂದ ಅರ್ಜಿ ಆಹ್ವಾನ

300x250 AD

ಕಾರವಾರ: ಕೃಷಿ ಯಾಂತ್ರಿಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೊವೆಟರ್, ಕಳೆ ಕೊಚ್ಚುವ ಯಂತ್ರಗಳು, ಪವರ್ ವಿಡರ್, ಪವರ್ ಸ್ಟೆಯರ್, ಡೀಸೆಲ್ ಪಂಪಸೆಟ್, ಪ್ಲೊರ‍್ಮೀಲ್, ಯಂತ್ರ ಚಾಲಿತ ಮೊಟೊಕಾರ್ಟ, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ಹಾಗೂ ತುಂತುರು ನೀರಾವರಿ ಯೋಜನೆಯಡಿಯಲ್ಲಿ ಶೇ. 90 ರ ರಿಯಾಯಿತಿ ದರದಲ್ಲಿ ತುಂತುರು ನೀರಾವರಿ ಘಟಕ (ಹೆಚ್‌ಡಿಪಿಇ ಪೈಪ್) ವಿತರಿಸಲಾಗುತ್ತಿದ್ದು, ಆಸಕ್ತ ರೈತರು ಪಹಣಿ (ಆರ್.ಟಿ.ಸಿ) ಆಧಾರ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಝೇರಾಕ್ಸ್ ಎರಡು ಭಾವಚಿತ್ರ, ರೂ 100 ಛಾಪಾ ಕಾಗದದೊಂದಿಗೆ ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ರೈತರಿಗೆ ನೀರು ಸಂಗ್ರಹಣಾ ರಚನೆ (ಕೃಷಿ ಹೊಂಡ), ಕೃಷಿ ಹೊಂಡದ ಸುತ್ತಲು ತಂತಿ ಬೇಲಿ ನಿರ್ಮಾಣ, ಹೊಂಡದಿಂದ ನೀರು ಎತ್ತಲು ಡೀಸೆಲ್/ಸೋಲಾರ್ ಪಂಪ್‌ಸೆಟ್(10ಎಚ್.ಪಿ ವರೆಗೆ) ಮತ್ತು ಬೆಳೆಗೆ ನೀರು ಹಾಯಿಸಲು ಸೂಕ್ಷ್ಮ ನೀರಾವರಿ ಘಟಕ ಸೌಲಭ್ಯಗಳನ್ನು ಸಾಮಾನ್ಯ ರೈತರಿಗೆ ಶೇ. 90 ರಷ್ಟು ಸಹಾಯಧನದಲ್ಲಿ ನೀಡಲಾಗುವುದು. ಕೃಷಿ ಭಾಗ್ಯ ಯೋಜನೆಗೆ ರೈತರು ಒಟ್ಟು ಸಾಗುವಳಿ ಕ್ಷೇತ್ರದ ಒಂದು ಸರ್ವೇ ನಂಬರನಲ್ಲಿ ಕನಿಷ್ಠ 1 ಎಕರೆ ಭೂಮಿ ಹೊಂದಿರಬೇಕು, ಹಿಂದಿನ ಸಾಲುಗಳಲ್ಲಿ ಕೃಷಿ ಭಾಗ್ಯ ಯೋಜನೆ ಅಥವಾ ಇನ್ನಾವುದೇ ಯೋಜನೆಯಡಿ ಕೃಷಿ ಹೊಂಡ ಫಲಾನುಭವಿಯಾಗಿರುವ ರೈತರು ಈ ಯೋಜನೆಗೆ ಅರ್ಹತೆ ಹೊಂದಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top