ಹೊನ್ನಾವರ: ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಟೈರ್ ಹತ್ತಿ ಪ್ರಯಾಣಿಕನ ಕಾಲಿಗೆ ಗಂಭೀರ ಪೆಟ್ಟಾದ ಘಟನೆ ಶನಿವಾರ ನಡೆದಿದೆ.
ಉಡುಪಿ ಮಾರ್ಗದ ಬಸ್ ಹತ್ತುವಾಗ ಹಿಮ್ಮುಖವಾಗಿ ಚಲಿಸುತ್ತಿದ್ದ ಬಸ್ ಟೈಯರ್ ನಡಿ ಸಿಲುಕಿದ ಪ್ರಯಾಣಿಕನ ಕಾಲಿಗೆ ಗಂಭೀರ ಪೆಟ್ಟಾಗಿದೆ.ಕುಮಟಾ ಮಾಸೂರಿನ ಕೃಷ್ಣ ಶಿವು ಗೌಡ ಗಾಯಾಳುವಾಗಿದ್ದು, ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.