ಶಿರಸಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ)ಶಿರಸಿ ಇದರ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರವು ತಾಲ್ಲೂಕಿನ ಹನುಮಂತಿ ಗ್ರಾಮದ ಸಭಾಭವನದಲ್ಲಿ ಭಾನುವಾರ ನಡೆಯಿತು.
ಶಿರಸಿ ತಾಲೂಕು ಯೋಜನಾಧಿಕಾರಿ ರಾಘವೇಂದ್ರ ನಾಯ್ಕ್ ಶಿಬಿರದ ಉದ್ಘಾಟನೆ ನೆರವೇರಿಸಿ, ಗ್ರಾಮಾಭಿವೃದ್ಧಿ ಯೋಜನೆ ಸದಸ್ಯರ ಜೊತೆಯಲ್ಲಿ ಗ್ರಾಮಸ್ಥರ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಗ್ರಾಮ, ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣಾ, ಕಣ್ಣಿನ ತಪಾಸಣಾ ಕಾರ್ಯಕ್ರಮಗಳು, ಮಾಶಾಸನ, ಸಹಾಯಧನ, ವಾತ್ಸಲ್ಯ ಕಾರ್ಯಕ್ರಮ, ಸಂಪೂರ್ಣ ಸುರಕ್ಷಾ, ಜನಮಂಗಳ,ಕೃಷಿ ಅನುದಾನದಂತಹ ಹಲವಾರು ಕಾರ್ಯಕ್ರಮಗಳನ್ನು ಯೋಜನೆಯ ಅಡಿಯಲ್ಲಿ ಮಾಡುತ್ತಿದ್ದು ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಹನುಮಂತಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಿವಕುಮಾರ ಮಾತನಾಡಿ, ಶ್ರೀ ಕ್ರೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಸಮಾಜದ ಅಭಿವೃದ್ಧಿಯ ಜೊತೆಗೆ ಗ್ರಾಮೀಣ ಭಾಗದ ಮಹಿಳೆಯರ ಸಬಲೀಕರಣಕ್ಕಾಗಿ ಶ್ರಮಿಸುತ್ತಿದೆ. ಯೋಜನೆಯ ಕಾರ್ಯಗಳು ಶ್ಲಾಘನೀಯವಾಗಿದೆ ಎಂದರು.
ಹಣಸೆಕೊಪ್ಪ ಗ್ರಾಪಂ ಅಧ್ಯಕ್ಷೆ ಹೇಮಾವತಿ ಗೌಡ ಹಾಗೂ ಒಕ್ಕೂಟದ ಅಧ್ಯಕ್ಷ ದತ್ತಾತ್ರೇಯ ಗೌಡ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಿರಸಿ ಐ ಕ್ಯೂರ್ ಸಂಸ್ಥೆಯ ಅಯೋಜಕಿ ಗಾಯತ್ರಿ, ವೀಣಾ, ವಿ ಎಲ್ ಇ ಪಲ್ಲವಿ ಹಾಗೂ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸದಸ್ಯರು, ಸಾರ್ವಜನಿಕರು ಇದ್ದರು.
ಜ್ಞಾನ ವಿಕಾಸದ ತಾಲ್ಲೂಕ ಸಮನ್ವಯಾಧಿಕಾರಿ ಮಲ್ಲಿಕಾ ಶೆಟ್ಟಿ ನಿರೂಪಿಸಿ, ಸ್ವಾಗತಿಸಿದರು. ಸೇವಾ ಪ್ರತಿನಿಧಿ ಸವಿತಾ ವಂದಿಸಿದರು.