ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಡಿ.10, ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಮುತ್ಸದ್ದಿ ರಾಜಕಾರಣಿಯ ನಿಧನದ ಕಾರಣದಿಂದ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚಾರಣೆ ಘೋಷಿಸಿದೆ.
ಡಿ.11, ಬುಧವಾರ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ಸರ್ಕಾರಿ ಶಾಲಾ ಕಾಲೇಜು ಸಹಿತ ಖಾಸಗಿ ಶಾಲಾ ಕಾಲೇಜುಗಳಿಗೂ ಬುಧವಾರ ರಜೆ ಘೋಷಿಸಲಾಗಿದೆ.