ಕಾರವಾರ: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಕಾರವಾರ ಹಾಗೂ ತಾಲೂಕಾ ಪಂಚಾಯತ (ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಯೋಜನೆ(ಎನ್.ಆರ್.ಎಲ್.ಎಮ್), ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಡಿ.20 ರಿಂದ ಡಿ.31 ವರೆಗೆ ಸಾಮಾನ್ಯ ವರ್ಗದ ಪುರುಷರು/ಮಹಿಳೆಯರಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು, ಅಂಕೋಲಾ ತಾಲೂಕಾ ಪಂಚಾಯತ ಸಾಮರ್ಥ್ಯ ಸೌಧದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಸಾಧನಾ ಪ್ರೇರಣಾ ತರಬೇತಿ, ಉದ್ಯಮಶೀಲರ ಸಾಮರ್ಥ್ಯಗಳನ್ನು ಗುರುತಿಸುವಿಕೆ, ವ್ಯವಸ್ಥಾಪನಾ ಕೌಶಲ್ಯಗಳು, ಹೊಸ ಉದ್ಯಮಗಳ ಸ್ಥಾಪನೆಗೆ ಇರುವ ಅವಕಾಶಗಳು, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಲೆಕ್ಕ ಪತ್ರಗಳ ನಿರ್ವಹಣೆ, ಮಾರಾಟದ ತಂತ್ರಗಳು, ಸರ್ಕಾರದ ಯೋಜನೆಗಳು, ಬ್ಯಾಂಕಗಳ ಪಾತ್ರ, ಉದ್ಯಮಶೀಲರ ಅನುಭವ ಹಂಚಿಕೆ, ಸಣ್ಣ ಉದ್ಯಮ ನಿರ್ವಹಣೆ, ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಈ ಅವಧಿಯಲ್ಲಿ ಒಂದು ದಿನ ಕೈಗಾರಿಕೆಗಳಿಗೆ ಭೇಟಿ ನೀಡಿ ಆ ಕೈಗಾರಿಕೆಗಳ ಮಾಲೀಕರ ಜೊತೆಗೆ ಚರ್ಚೆಗೆ ಅವಕಾಶ ನೀಡಲಾಗುವುದು.
ಉದ್ಯಮ ಪ್ರಾರಂಭಿಸಲು ಉತ್ಸುಕರಾಗಿರುವ ಅಂಕೋಲಾ ತಾಲೂಕಿನ ಸಾಮಾನ್ಯ ವರ್ಗದ ಪುರುಷರು/ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು 18 ರಿಂದ 50 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ. ಶಿಕ್ಷಣ ಹೊಂದಿರಬೇಕು. ಆಸಕ್ತಿಯುಳ್ಳ ಪುರುಷರು/ಮಹಿಳೆಯರು ಡಿ.19 ರೊಳಗಾಗಿ ಉಪ ನಿರ್ದೇಶಕರು, ಸಿಡಾಕ್, ಶಿರವಾಡ, ಕಾರವಾರ ಇವರಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಾರವಾರ ಸಿಡಾಕ್ ಉಪ ನಿರ್ದೇಶP ಶಿವಾನಂದ ವೆಂ. ಎಲಿಗಾರ ಮೋ. ಸಂಖ್ಯೆTel:+919448812974 ತರಬೇತುದಾರರಾದ ಶಿವರಾಜಕುಮಾರ ಹೆಳವಿ, ಮೋ ಸಂಖ್ಯೆ: Tel:+918722708795ಹಾಗೂ ಪ್ರತಿಭಾ ಹೆಳವಿ ಮೋ ಸಂಖ್ಯೆTel:+918105224080 ನ್ನು ಸಂಪರ್ಕಿಸುವAತೆ ಕಾರವಾರ ಸಿಡಾಕ್ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.