ಕಾರವಾರ: ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಟ್ರಸ್ಟ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಟಿವಿ ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್ 18 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದು.
ಟಿವಿ ಟೆಕ್ನಿಷಿಯನ್ ತರಬೇತಿಯಲ್ಲಿ ಬೇಸಿಕ್ನಿಂದ ಅತ್ಯಧಿಕ ತಂತ್ರಜ್ಞಾನದವರೆಗೆ ತರಬೇತಿ ನೀಡಲಾಗುವುದು. ಥಿಯರಿ ಜೊತೆಯಲ್ಲಿ ಪ್ರಾಕ್ಟಿಕಲ್ ತರಬೇತಿಯನ್ನು ಸಹ ನೀಡಲಾಗುವುದು. ಇದರಲ್ಲಿ ಇಲೆಕ್ಟ್ರಾನಿಕ್ ಸ್ಪೇರ್ ಪಾರ್ಟ್ಸ್, ಕಲರ್ ಟಿವಿ, ಆಂಡ್ರಾಯ್ಡ್, ಸ್ಮಾರ್ಟ್, 4ಕೆ, ಟಿವಿ ಎಲ್ಇಡಿ ಮತ್ತು ಎಲ್ಸಿಡಿ ಟಿವಿಯಾ ಮದರ್ ಬೋರ್ಡ್, ಸಾಫ್ಟ್ ವೇರ್ ಪವರ್ ಸಪ್ಲೈ ಜೊತೆಯಲ್ಲಿ ಆಡಿಯೋ ಸಿಸ್ಟಮ್ ರಿಪೇರಿ, ಎಲ್ಲಾ ಕಂಪನಿಯ ಡಿಟಿಹೆಚ್ ಅಳವಡಿಕೆ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ರಿಪೇರಿ ಸಹ ಇರುತ್ತದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ:Tel:+919380162042, Tel:+919241482541,Tel:+919740982585 ನ್ನು ಸಂಪರ್ಕಿಸುವಂತೆ ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.