ಶಿರಸಿ: ಡಿಸೆಂಬರ್ ಆರನೇ ತಾರೀಕಿನಂದು ಯಲ್ಲಾಪುರ ತಾಲೂಕಾ ಆಸ್ಪತ್ರೆಯಲ್ಲಿ ವಿಶ್ವ ಸೇವಾ ಸಮಿತಿ ಪಿಡಿಜಿ ರೋ. ಸುಬ್ರಾವ್ ಕಾಸರಕೋಡ ಮೆಮೋರಿಯಲ್ ರೋಟರಿ ಚಾರಿಟೇಬಲ್ ಆಸ್ಪತ್ರೆ ಶಿರಸಿ, ಜಿಲ್ಲಾ ಅಂದತ್ವ ನಿವಾರಣ ಸಂಸ್ಥೆ ಕಾರವಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಕಾರವಾರ, ತಾಲೂಕ ಆಸ್ಪತ್ರೆ ಯಲ್ಲಾಪುರ, ಗ್ರೀನ್ ಕೇರ್ (ರಿ.) ಶಿರಸಿ ಮತ್ತು ಸಂಕಲ್ಪ ಟ್ರಸ್ಟ್ ಶಿರಸಿ ಮತ್ತು ಯುವರ್ ಎಡ್ ಕ್ರಾಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯಲ್ಲಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಚಿತ ಕಣ್ಣಿನ ಪೊರೆ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆಯ ಶಿಬಿರದಲ್ಲಿ 144 ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿ 72 ಶಿಬಿರಾರ್ಥಿ ಗಳನ್ನು ಆಯ್ಕೆ ಮಾಡಿ ಅದರಲ್ಲಿ 56 ಶಿಬಿರಾರ್ಥಿಗಳಿಗೆ ಶಸ್ತ್ರಚಿಕಿತ್ಸೆ ಮಾಡಿಸಲು ಶಿರಸಿಯ ರೋಟರಿ ಚಾರಿಟೇಬಲ್ ಆಸ್ಪತ್ರೆಗೆ ದಾಖಲಿಸಿ 2 ಗುಂಪುಗಳಾಗಿ ವಿಂಗಡಿಸಿ ರೋಟರಿ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಆದಿತ್ಯ ಫಡ್ನಿಸ್ ಯಶಸ್ವಿ ಶಸ್ತ್ರ ಚಿಕಿತ್ಸೆಯನ್ನು ಮಾಡಿದರು. ನಂತರ ಎಲ್ಲಾ ಶಿಬಿರಾರ್ಥಿಗಳಿಗೆ ರೋಟರಿ ಆಸ್ಪತ್ರೆಯಲ್ಲಿ ಒಂದು ದಿನದ ವಿಶ್ರಾಂತಿಯ ನಂತರ ಎಲ್ಲರಿಗೂ ಕಪ್ಪು ಕನ್ನಡಕಗಳನ್ನು ಕೊಟ್ಟು ಶಿಬಿರದ ಸಂಘಟಕರಾದ ಗಿರೀಶ್ ಧಾರೇಶ್ವರ್ ಶಸ್ತ್ರ ಚಿಕಿತ್ಸೆಯ ನಂತರ ಕಣ್ಣಿನ ಆರೋಗ್ಯ ಮತ್ತು ಸ್ವಚ್ಛತೆಯ ಬಗ್ಗೆ ಉಪನ್ಯಾಸ ನೀಡಿದರು. ರೋಟರಿ ಆಸ್ಪತ್ರೆಯ ಆಡಳಿತ ಅಧಿಕಾರಿಯವರಾದ ಶಿವಕುಮಾರ ಸ್ವಾಮಿ ಮಾತನಾಡಿ ವಿಶ್ವ ಸೇವಾ ಸಮಿತಿಯ ರೋಟರಿ ಚಾರಿಟೇಬಲ್ ಆಸ್ಪತ್ರೆಯವರ ಜೊತೆ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ ಭಾಗವಹಿಸುತ್ತಿರುವ
ಗ್ರೀನ್ ಕೇರ್ ಸಂಸ್ಥೆಯವರನ್ನು ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಗ್ರೀನ್ ಕೇರ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಜಿತೇಂದ್ರ ಕುಮಾರ್ ಆರ್. ಎಂ, ಗ್ರೀನ್ ಕೇರ್ ಸಂಸ್ಥೆಯ ಸಿಬ್ಬಂದಿಗಳಾದ ಶ್ರೀಮತಿ ಅಪ್ಸಾನಾ ಮತ್ತು ಮಹಾಂತೇಶ್ ಪ್ರಭುದೇವ್ ಎಲ್ಲರೂ ಸೇರಿ ಎಲ್ಲಾ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಇಂದಿನಿಂದ 30 ದಿನದ ನಂತರ ಯಲ್ಲಾಪುರ ತಾಲೂಕಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಎಲ್ಲಾ ಶಿಬಿರಾರ್ಥಿಗಳನ್ನು ಮತ್ತೊಮ್ಮೆ ಪರೀಕ್ಷಿಸಿ ಸೂಕ್ತ ಕನ್ನಡಕಗಳನ್ನು ಕೊಡಲಾಗುವುದು ಎಂದು ಶಿಬಿರದ ಸಂಘಟಕರು ತಿಳಿಸಿದರು.