Slide
Slide
Slide
previous arrow
next arrow

ಪ.ಪಂ, ಪ. ಜಾತಿ ಕ್ರೀಡಾಪಟುಗಳಿಂದ ಪ್ರೋತ್ಸಾಧನಕ್ಕಾಗಿ: ಅರ್ಜಿ ಆಹ್ವಾನ

300x250 AD

ಕಾರವಾರ- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2023 ನೇ ಕ್ಯಾಲೆಂಡರ್ ವರ್ಷದಲ್ಲಿ (01-01-2023 ರಿಂದ 31-12-2023)ಅಂತರಾಷ್ಟ್ರೀಯ,ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ
ಉತ್ತರ ಕನ್ನಡ ಜಿಲ್ಲೆಯಿಂದ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಕ್ರೀಡಾಪಟುಗಳು ಪ್ರೋತ್ಸಾಹಧನಕ್ಕಾಗಿ ಡಿ.20 ರೊಳಗಾಗಿ ಅರ್ಜಿಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾರ್ಯಾಲಯಕ್ಕೆ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಅಥವಾ ಕಚೇರಿಯ ದೂರವಾಣಿ ಸಂಖ್ಯೆ:Tel:+9108382201824 ಹಾಗೂ ಮೊಬೈಲ್ ಸಂಖ್ಯೆ: 9480886551 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

300x250 AD
Share This
300x250 AD
300x250 AD
300x250 AD
Back to top