ಸಿದ್ದಾಪುರ: ತಾಲೂಕು ಏಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಜಿ.ಜಿ.ಹೆಗಡೆ ಬಾಳಗೋಡ ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ.
ಪಟ್ಟಣದ ಕಸಾಪ ಕಚೇರಿಯಲ್ಲಿ ನಡೆದ ತಾಲೂಕು ಕಸಾಪ ಪದಾಧಿಕಾರಿಗಳ ಕಾರ್ಯಕಾರಿ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಸೋಮವಾರ ನಡೆಯಿತು. ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ ಅನುಮೋದನೆ ನೀಡಿದ್ದಾರೆ ಎಂದು ತಾಲೂಕು ಕಸಾಪ ಅಧ್ಯಕ್ಷ ಗೋಪಾಲ ಕೆ.ನಾಯ್ಕ ತಿಳಿಸಿದ್ದಾರೆ.
ಜಿ.ಜಿ.ಹೆಗಡೆ ಬಾಳಗೋಡ ತಾಲೂಕು ಕಸಾಪದ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿಯಾಗಿಯೂ ಈ ಹಿಂದೆ ಅವರು ಸೇವೆ ಸಲ್ಲಿಸಿದ್ದಾರೆ.
ಕವಂಚೂರು ಮಲೆನಾಡ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ, ಮುಖ್ಯಾಧ್ಯಾಪಕರಾಗಿ ಸೇವೆಸಲ್ಲಿಸಿ ನಿವೃತ್ತರಾಗಿದ್ದಾರೆ. ಜಿ.ಜಿ.ಹೆಗಡೆ ಅವರು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಪ್ರಶಸ್ತಿಗೆ ಭಾಜನರಾದವರೂ ಆಗಿದ್ದಾರೆ. ಸಾಹಿತ್ಯ ಕ್ಷೇತ್ರಕ್ಕೆ 17ಕೃತಿಗಳನ್ನು ಈಗಾಲೇ ನೀಡಿದ್ದಾರೆ.
ಪಟ್ಟಣದ ಶಂಕರಮಠದಲ್ಲಿ ಡಿ.30ರಂದು ತಾಲೂಕು ಏಳನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.