ಕುಮಟಾ: ಇಲ್ಲಿಯ ಚಿತ್ರಿಗಿ ಮಹಾತ್ಮಾ ಗಾಂಧಿ ಪ್ರೌಢಶಾಲೆಯ ನೂತನ ಮುಖ್ಯಾಧ್ಯಾಪಕರಾಗಿ ಗಿಬ್ ಬಾಲಕೀಯರ ಪ್ರೌಢಶಾಲೆಯಲ್ಲಿ ಸಹ ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಪಾಂಡುರಂಗ ವಾಗ್ರೇಕರ ಅವರು ಮುಖ್ಯಾಧ್ಯಾಪಕರಾಗಿ ಭಡ್ತಿ ಹೊಂದಿದ್ದಾರೆ.
ಈ ಸಂದರ್ಭದಲ್ಲಿ ಕೆನರಾ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಎಸ್.ಎನ್.ಪ್ರಭು, ಗಿಬ್ ಹೈಸ್ಕೂಲಿನ ನಿವೃತ್ತ ಮುಖ್ಯಾಧ್ಯಾಪಕರಾದ ಮುರಲೀಧರ ಪ್ರಭು, ನಿಕಟಪೂರ್ವ ಮುಖ್ಯಾಧ್ಯಾಪಕ ಎನ್.ಆರ್.ಗಜು, ಪ್ರಭಾರೆ ಮುಖ್ಯಾಧ್ಯಾಪಕರಾಗಿದ್ದ ವಿ.ಎನ್.ಭಟ್ಟ ಉಪಸ್ಥಿತರಿದ್ದು ಶುಭ ಹಾರೈಸಿದರು. ಆಡಳಿತ ಮಂಡಳಿ, ಶಾಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿದರು.