ಕಾರವಾರ: ಜಿಲ್ಲಾಡಳಿತದ ವತಿಯಿಂದ ‘ವಿಜಯ ದಿವಸ’ ಕಾರ್ಯಕ್ರಮವನ್ನು ಡಿ. 16 ರಂದು ಬೆಳಗ್ಗೆ 10.30 ಗಂಟೆಗೆ ರವೀಂದ್ರನಾಥ್ ಟಾಗೋರ್ ಕಡಲತೀರದ ಯುದ್ದನೌಕಾ ವಸ್ತು ಸಂಗ್ರಹಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಉಸ್ತುವಾರಿ ಸಚಿವ ಮಾಂಕಾಳ ಎಸ್ ವೈದ್ಯ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಸತೀಶ್ ಕೆ. ಸೈಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಉಳ್ವೇಕರ, ನಗರ ಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ ಮತ್ತಿತರು ಪಾಲ್ಗೊಳ್ಳಲಿದ್ದಾರೆ.