Slide
Slide
Slide
previous arrow
next arrow

ಕಂಪ್ಯೂಟರ್ ಡಿಟಿಪಿ/ಗ್ರಾಫಿಕ್ ಡಿಸೈನ್ ತರಬೇತಿ: ನೇರ ಸಂದರ್ಶನ

300x250 AD

ಕಾರವಾರ: ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಡಿಟಿಪಿ ಕುರಿತ 45 ದಿನಗಳ ಉಚಿತ ತರಬೇತಿಯು ಡಿ.18 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಡಿ.18 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರಬೇಕು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಸಂದರ್ಶನದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: Tel:+919380162042, Tel:+919241482541, Tel:+919740982585 ನ್ನು ಸಂಪರ್ಕಿಸಬಹುದೆಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top