ಶಿರಸಿ: ಕೃಷಿ ಇಲಾಖೆಯಿಂದ ರಾಜ್ಯಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಡಿ. 23 ರಂದು ಬೆಳಗ್ಗೆ 10 ಗಂಟೆಗೆ ಶಿರಸಿಯ ಅರಣ್ಯ ಮಹಾವಿದ್ಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದೆ.
ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಿಬಹುದು. ಸಸ್ಯಹಾರ ತಿನಿಸುಗಳಿಗೆ ಮಾತ್ರ ಅವಕಾಶವಿದೆ. ಪ್ರತಿ ಸ್ಪರ್ಧಿಗೆ ಸಿರಿಧಾನ್ಯದ ಒಂದೇ ತಿನಿಸು (ಅಡುಗೆ) ಸಿಹಿ ಅಥವಾ ಖಾರ ಮಾಡಲು ಜೊತೆಗೆ ಒಂದು ಮರೆತುಹೋದ ಖಾದ್ಯವನ್ನು ಮಾಡಲು ಅವಕಾಶವಿರುತ್ತದೆ. ಅರ್ಜಿಯಲ್ಲಿ ನಮೂದಿಸಿದ ತಿನಿಸುಗಳನ್ನು ಮನೆಯಲ್ಲಿಯೇ ತಯಾರಿಸಿ ಸ್ಪರ್ಧೆಯಲ್ಲಿ ಪ್ರದರ್ಶಿಸಬೇಕು. ವಿಜೇತರಿಗೆ ನಗದು ಬಹುಮಾನ ನೀಡಲಾಗುತ್ತದೆ. ಪ್ರಥಮ ವಿಜೇತರು ಜನವರಿ 2025 ರಲ್ಲಿ ನಡೆಯುವ ರಾಜ್ಯ ಮಟ್ಟದ ಪಾಕ ಸ್ಪರ್ಧೆಯಲ್ಲಿ ಭಾಗವಹಿಸಬೇಕು.
ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು ವಿಳಾಸ ಮತ್ತು ತಯಾರಿಸುವ ಖಾದ್ಯಕ್ಕೆ ಬೇಕಾಗುವ ಸಾಮಾಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಕಚೇರಿಯ ಇ ಮೇಲ್: Mailto:ukmillets@gmail.com ಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಜಂಟಿ ಕೃಷಿ ನಿರ್ದೇಶಕರು ಕಾರವಾರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: Tel:+918277933002 ಅಥವಾ Tel:+918277933064 ನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.