Slide
Slide
Slide
previous arrow
next arrow

ದಾಂಡೇಲಿಯಲ್ಲಿ ಯಶಸ್ವಿಯಾದ ರಾಷ್ಟ್ರೀಯ ಲೋಕ್ ಅದಾಲತ್

300x250 AD

ದಾಂಡೇಲಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉತ್ತರ ಕನ್ನಡ ಮತ್ತು ತಾಲೂಕು ಕಾನೂನು ಸೇವಾ ಸಮಿತಿಯ ಆಶ್ರಯದಡಿ ನಗರದ ಸಿವಿಲ್ ನ್ಯಾಯಾಲಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವು ಶನಿವಾರ ಯಶಸ್ವಿಯಾಗಿ ಸಂಪನ್ನಗೊಂಡಿತು.

ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ರೋಹಿಣಿ ಡಿ ಬಸಾಪುರ ಅವರ ನೇತೃತ್ವದಲ್ಲಿ ನಡೆದ ಲೋಕ್ ಅದಾಲತಿನಲ್ಲಿ ಚೆಕ್ ಬೌನ್ಸ್ ಪ್ರಕರಣಗಳು, ಎಂ.ವಿ.ಸಿ ಪ್ರಕರಣ, ಮೂಲದಾವಾ ಪ್ರಕರಣಗಳು, ಜನನ-ಮರಣ ಪ್ರಕರಣಗಳು, ಪೊಲೀಸ್ ಪ್ರಕರಣಗಳು ಸೇರಿದಂತೆ ಮೊದಲಾದ ಪ್ರಕರಣಗಳು ಸೇರಿ ಒಟ್ಟು 419 ಪ್ರಕರಣಗಳಲ್ಲಿ 220 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ರೂ. 33,15,047/- ವಸೂಲಾಗಿರುತ್ತದೆ.

300x250 AD

ಸಂಧಾನಕಾರರಾಗಿ ನ್ಯಾಯವಾದಿ ಕವಿತಾ ಹಂಪನ್ನವರ ಸಹಕರಿಸಿದರು. ಈ ಸಂದರ್ಭದಲ್ಲಿ ಎಪಿಪಿ ರಮೇಶ ಬಂಕಾಪುರ, ವಕೀಲರ ಸಂಘದ ಅಧ್ಯಕ್ಷರಾದ ಎಚ್.ಎಸ್ ಕುಲಕರ್ಣಿ ಹಾಗೂ ನ್ಯಾಯವಾದಿಗಳು ಮತ್ತು ಸಿವಿಲ್ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು, ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top