Slide
Slide
Slide
previous arrow
next arrow

ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ವಿಧಿವಶ

300x250 AD

ನವದೆಹಲಿ: ಖ್ಯಾತ ತಬಲಾ ವಾದಕ ಉಸ್ತಾದ್ ಜಾಕೀರ್ ಹುಸೇನ್ ವಿಧಿವಶರಾಗಿದ್ದಾರೆ.

73 ವಯಸ್ಸಿನ ಜಾಕಿರ್ ಅವರಿಗೆ ರಕ್ತದೊತ್ತಡ ಸಮಸ್ಯೆ ಇತ್ತು. ಕಳೆದ ವಾರದಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ .

ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾ ಅವರ ಹಿರಿಯ ಮಗನಾಗಿರುವ ಜಾಕಿರ್ ಹುಸೇನ್ ಭಾರತ ಸೇರಿದಂತೆ ವಿಶ್ವದಲ್ಲಿಯೇ ತಬಲಾ ವಾದನವನ್ನು ಪ್ರಖ್ಯಾತಿಗೆ ತಂದರು. ಹುಸೇನ್ ತಮ್ಮ ವೃತ್ತಿಜೀವನದಲ್ಲಿ ಐದು ಗ್ರಾಮಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಈ ವರ್ಷದ ಆರಂಭದಲ್ಲಿ ನಡೆದ 66 ನೇ ಟ್ರ್ಯಾಮಿ ಪ್ರಶಸ್ತಿ ಸಮಾರಂಭದಲ್ಲಿ ಮೂರು ಪ್ರಶಸ್ತಿ ಗೆದ್ದಿದ್ದರು.

300x250 AD

ತಾಳವಾದ್ಯ ಮಾಂತ್ರಿಕ ಹುಸೇನ್ ಅವರು, ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿದ್ದು, ಅವರಿಗೆ 1988 ರಲ್ಲಿ ಪದ್ಮಶ್ರೀ, 2002 ರಲ್ಲಿ ಪದ್ಮಭೂಷಣ ಮತ್ತು 2023 ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಅರಸಿ ಬಂದಿವೆ.

Share This
300x250 AD
300x250 AD
300x250 AD
Back to top