Slide
Slide
Slide
previous arrow
next arrow

SKDRP ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ: ರಂಗನಾಥ ಎಸ್.

300x250 AD

ಬನವಾಸಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರಾಜ್ಯಾದ್ಯಂತ ಸಮಾಜದ ಎಲ್ಲ ಕ್ಷೇತ್ರಗಳ ಹಾಗೂ ಎಲ್ಲ ವರ್ಗದ ಜನರ ಅಭಿವೃದ್ದಿ, ಗ್ರಾಮಗಳ ಕಲ್ಯಾಣ, ಮಹಿಳಾ ಸಬಲೀಕರಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಾ ಬರುತ್ತಿದೆ ಎಂದು ಸುಗಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ರಂಗನಾಥ ಎಸ್. ಹೇಳಿದರು.

ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ ಶಿರಸಿ ಬಿಸಲಕೊಪ್ಪ ವಲಯದ ಕುಪ್ಪಗಡ್ಡೆ ಬೆಳ್ಳನಕೇರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಭಾನುವಾರ ವಿನಾಯಕ ಜ್ಞಾನವಿಕಾಸ ಕೇಂದ್ರದಿಂದ ಹಮ್ಮಿಕೊಂಡ ಆರೋಗ್ಯ ಕುರಿತು ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಉತ್ತಮ ರೀತಿಯ ಬದುಕಿಗೆ ಆರೋಗ್ಯವೂ ಅತ್ಯಗತ್ಯ. ಆರೋಗ್ಯ ಸುಧಾರಣೆಗಾಗಿ ಆರೋಗ್ಯ ಇಲಾಖೆಯು ಸತತವಾಗಿ ಕ್ರಮಗಳನ್ನು ತೆಗೆದುಕೊಂಡಿದ್ದರೂ ನಿರೀಕ್ಷಿಸಿದಷ್ಟು ಫ‌ಲಕೊಡುತ್ತಿಲ್ಲ. ಹೆಚ್ಚಾಗಿ ಮಹಿಳೆಯರಲ್ಲಿ ಅನೀಮಿಯಾ, ಮಕ್ಕಳಲ್ಲಿ ಅಪೌಷ್ಟಿಕತೆ, ಕುಂಠಿತ ಬೆಳವಣಿಗೆ, ರಕ್ತ ಕಣಗಳ ಕೊರತೆ, ಸಾಂಕ್ರಾಮಿಕ ರೋಗಗಳ ನಿರ್ಲಕ್ಷ್ಯ ನಿವಾರಣೆಯಾಗಿಲ್ಲ. ಸಾಮಾಜಿಕ ಹಾಗೂ ಆರ್ಥಿಕ ಕಾರಣಗಳು ಬಡತನ ಮತ್ತು ಶಿಕ್ಷಣದ ಕೊರತೆ ಹಾಗೂ ಮೂಲ ಸೌಕರ್ಯಗಳ ಕೊರತೆಗಳೇ ಆರೋಗ್ಯದ ಕೆಡುಕಿಗೆ ತಳಹದಿಯಾಗಿದೆ. ಯೋಗಕ್ಷೇಮಕ್ಕೆ ಉತ್ತಮ ಮಾನಸಿಕ ಆರೋಗ್ಯವು ಅಷ್ಟೇ ಮುಖ್ಯವಾಗಿದೆ. ಮಾನಸಿಕ ಆರೋಗ್ಯವು ಒಟ್ಟಾರೆ ಆರೋಗ್ಯದ ಅಡಿಪಾಯವಾಗಿದ್ದು ಇದನ್ನು ಪ್ರತಿದಿನವೂ ನಿರ್ವಹಿಸುವುದು ಮತ್ತು ನಿರ್ಣಯಿಸುವುದು ಬಹಳ ಮುಖ್ಯವಾಗಿದೆ. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಗ್ರಾಮೀಣ ಭಾಗದ ಜನರಿಗೆ ಆರ್ಥಿಕ ಸಬಲೀಕರಣ, ಶೈಕ್ಷಣಿಕ ಅಭಿವೃದ್ದಿ, ಕೃಷಿ, ಅರೋಗ್ಯ ತಪಾಸಣಾ ಶಿಬಿರದಂತಹ ಕಾರ್ಯಕ್ರಮಗಳು ನಡೆಯುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಮಹಿಳಾ ಜ್ಞಾನ ವಿಕಾಸ ಕೇಂದ್ರದ ತಾಲ್ಲೂಕು ಸಮನ್ವಯಾಧಿಕಾರಿ ಮಲ್ಲಿಕಾ ಶೆಟ್ಟಿ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯು ಸದಸ್ಯರ ಜೊತೆಯಲ್ಲಿ ಸಮಾಜದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಗ್ರಾಮ, ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣಾ, ಕಣ್ಣಿನ ತಪಾಸಣಾ ಶಿಬಿರಗಳು, ಮಾಶಾಸನ, ಸಹಾಯಧನ, ವಾತ್ಸಲ್ಯ ಕಾರ್ಯಕ್ರಮ, ಸಂಪೂರ್ಣ ಸುರಕ್ಷಾ, ಜನಮಂಗಳ,ಕೃಷಿ ಅನುದಾನದಂತಹ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಿದ್ದು ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದರು.

300x250 AD

ಮಹಿಳಾ ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷೆ ರೇಣುಕಾ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಕಾರ್ಯಕ್ರಮದಲ್ಲಿ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top