ಶಿರಸಿ: ಯಲ್ಲಾಪುರದಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿಯಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್ನ 8ನೇ ವರ್ಗದ ವಿದ್ಯಾರ್ಥಿನಿ ಅನ್ವಿತಾ ಆರ್.ವಿ. ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
10ನೇ ತರಗತಿಯ ಪ್ರೇರಣಾ ಮಂಗಳೂರು ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ. ವಿದ್ಯಾರ್ಥಿಗಳಗೆ ಮತ್ತು ಮಾರ್ಗದರ್ಶಿ ಶಿಕ್ಷಕರಿಗೆ ಆಡಳಿತ ಮಂಡಳಿ,ಶಿಕ್ಷಕ ವೃಂದ ಹಾಗೂ ಪಾಲಕರು ಅಭಿನಂದಿಸಿದ್ದಾರೆ.