ಶಿರಸಿ: ವಿಜಯಪುರದಲ್ಲಿ ಶ್ರೀ ಭಗವದ್ಗೀತಾ ಅಭಿಯಾನದ ಪ್ರಯುಕ್ತ ಡಿ.13ರಂದು ಏರ್ಪಡಿಸಿದ ರಾಜ್ಯಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ತಾಲೂಕಿನ ಹೆಗಡೆಕಟ್ಟಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಇವಳು ಪ್ರಥಮ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾಳೆ. ಈ ವಿದ್ಯಾರ್ಥಿಯ ಸಾಧನೆಯನ್ನು ಮೆಚ್ಚಿ ಶಾಲೆಯ ಮುಖ್ಯಾಧ್ಯಾಪಕರು, ಸಹ ಶಿಕ್ಷಕರು, ಎಸ್ ಡಿ ಎಂ ಸಿ, ಪಾಲಕ ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ. ಇವಳು ಶ್ರೀ ಅಖಿಲ ಹವ್ಯಕ ಮಹಾಸಭಾದವರು ನಡೆಸುವ ಪ್ರತಿಬಿಂಬ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದು, ಫೆಬ್ರುವರಿಯಲ್ಲಿ ನಡೆಯುವ ಪ್ರತಿಬಿಂಬ ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ ಪಡೆಯಲೆಂದು ಶುಭ ಹಾರೈಸಿದ್ದಾರೆ.