ಕಾರವಾರ: ಪ್ರಸಕ್ತ ಸಾಲಿಗೆ ಡ್ರೋನ್ ಆಧಾರಿತ ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಇಚ್ಛಿಸುವ ಪರಿಶಿಷ್ಟ ಪಂಗಡದ ಯುವಕ/ ಯುವತಿಯರಿಗೆ ತರಬೇತಿ ನೀಡಲು ಅರ್ಜಿ ಅಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಡಿ.21 ರವರೆಗೆ ಅವಧಿ ವಿಸ್ತರಿಸಲಾಗಿದೆ.
ತರಬೇತಿ ಪಡೆಯುವ ಇಚ್ಛಿಸುವ ಪರಿಶಿಷ್ಟ ಯುವಕ/ ಯುವತಿಯರು ಅರ್ಜಿ ನಮೂನೆಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಮತ್ತು ಜಿಲ್ಲೆಯ ಎಲ್ಲಾ ಸಹಾಯಕ ನಿರ್ದೇಶಕರು ಗ್ರೇ-1/2, ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಪಡೆದು ಡಿ.21ರೊಳಗಾಗಿ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಗಳು ಉತ್ತರ ಕನ್ನಡ ಜಿಲ್ಲೆ ಕಾರವಾರರವರ ಕಚೇರಿಗೆ ಸಲ್ಲಿಸಬೇಕು.
ಷರತ್ತುಗಳು: ಆಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಪಡೆಯಲು ಪರುಷರಿಗೆ 35 ವರ್ಷ, ಮಹಿಳೆಯರಿಗೆ 40 ವರ್ಷ ವಯೋಮಿತಿ ಮೀರಿರಬಾರದು, ಅಭ್ಯರ್ಥಿಯ ಕುಟುಂಬದ ಆದಾಯ ರೂ.2.5 ಮೀರಿರಬಾರದು. ಮೂಲ ನಿವಾಸಿ ಮತ್ತು ಅಲೆಮಾರಿ/ಅರೆಅಲೆಮಾರಿ ಮತ್ತು ಸೂಕ್ಷö್ಮ/ಅತೀ ಸೂಕ್ಷö್ಮ ಪರಿಶಿಷ್ಟ ಪಂಗಡದ ಸಮುದಾಯದ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು.
ಅಭ್ಯರ್ಥಿಯು ತರಬೇತಿಯ ನೋಂದಣಿ ಸಮಯದಲ್ಲಿ ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಅಂಕಪಟ್ಟಿ ಮತ್ತು ಆಧಾರ ಕಾರ್ಡನ್ನು ಸಲ್ಲಿಸತಕ್ಕದ್ದು, ಅಭ್ಯರ್ಥಿಯು ತರಬೇತಿ ನೀಡುವ ಸ್ಥಳಕ್ಕೆ ಬರುವ ಪ್ರಯಾಣ ವೆಚ್ಚವನ್ನು ಇಲಾಖೆಯಿಂದ ಭರಿಸುವುದಿಲ್ಲ. ತರಬೇತಿಯ ಸಮಯದಲ್ಲಿ ಯಾವುದೇ ಶಿಷ್ಯವೇತನ ನೀಡುವುದಿಲ್ಲ, ಪ್ರಸ್ತಾಪಿತ ತರಬೇತಿ ಆನ್‌ಲೈನ್ ಮುಖಾಂತರ ಅವಕಾಶವಿರುದಿಲ್ಲ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.