Slide
Slide
Slide
previous arrow
next arrow

ಡಿ.19ಕ್ಕೆ ಶ್ರೀದೇವಿ ಶಿಕ್ಷಣ ಸಂಸ್ಥೆಯ ವಾರ್ಷಿಕ ಸ್ನೇಹ ಸಮ್ಮೇಳನ

300x250 AD

ಶಿರಸಿ: ತಾಲೂಕಿನ ಹುಲೇಕಲ್‌ನ ಶ್ರೀದೇವಿ ಶಿಕ್ಷಣ ಸಂಸ್ಥೆ, ಶ್ರೀದೇವಿ ಸಂಯುಕ್ತ ಪದವಿ ಪೂರ್ವ ಮಹಾ ವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನವು ಡಿ.19, ಗುರುವಾರ ಮಧ್ಯಾಹ್ನ 4.30ರಿಂದ ನಡೆಯಲಿದೆ.

ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಕಾರ್ಯಕ್ರಮದಲ್ಲಿ ದಿವ್ಯ ಉಪಸ್ಥಿತಿ ನೀಡಲಿದ್ದು, ಉಪವಿಭಾಗಾಧಿಕಾರಿ ಕಾವ್ಯಾರಾಣಿ ಕೆ.ವಿ. ಆಗಮಿಸಲಿದ್ದಾರೆ.
ಸಭಾಕಾರ್ಯಕ್ರಮದಲ್ಲಿ ಕೈ ಬರಹ ಪತ್ರಿಕೆಗಳ ಬಿಡುಗಡೆ, ವರದಿ ವಾಚನ, ಪ್ರತಿಭಾ ಪುರಸ್ಕಾರ, ಶ್ರೀಗಳಿಂದ ಆಶೀರ್ವಚನ ನಡೆಯಲಿದ್ದು, ನಂತರದಲ್ಲಿ ವಿದ್ಯಾರ್ಥಿಗಳಿಂದ ಲಘು ಸಂಗೀತ ಕಾರ್ಯಕ್ರಮ ಆಯೋಜನೆಗೊಂಡಿದೆ. ಇತಿಹಾಸ ಮತ್ತು ಕರಕುಶಲ ವಸ್ತು ಪ್ರದರ್ಶನ, ವಿಜ್ಞಾನ ಹಾಗೂ ಗಣಿತ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top