ಶಿರಸಿ: ಯಲ್ಲಾಪುರದಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಹಿರಿಯರ ವಿಭಾಗದ ಕಥೆ ಹೇಳುವ ಸ್ಪರ್ಧೆಯಲ್ಲಿ ಕುಮಾರಿ ಆರಾಧ್ಯಾ ಅರುಣ ನಾಯ್ಕ ದ್ವಿತೀಯ ಸ್ಥಾನ ಗಳಿಸಿದ್ದಾಳೆ.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಭದ್ರಾಪುರದಲ್ಲಿ ಐದನೆಯ ತರಗತಿಯಲ್ಲಿ ಓದುತ್ತಿರುವ ಇವಳು ಇದೇ ಶಾಲೆಯ ಮುಖ್ಯ ಶಿಕ್ಷಕರಾದ ಅರುಣ ನಾಯ್ಕ ಇವರ ಮಗಳು. ಇವಳಿಗೆ ಸಹ ಶಿಕ್ಷಕಿ ಶ್ರೀಮತಿ ರಂಜನಾ ಹೆಗಡೆ ತರಬೇತಿ ನೀಡಿದ್ದರು.
ಪ್ರತಿಭಾವಂತ ವಿದ್ಯಾರ್ಥಿನಿಯಾದ ಇವಳು ಕಳೆದ ವರ್ಷ ಕೂಡ ಕಿರಿಯರ ವಿಭಾಗದಲ್ಲಿ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಳು.
ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಎಸ್.ಡಿ.ಎಮ್.ಸಿ ಸದಸ್ಯರು, ಶಿಕ್ಷಕರು ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.