ಸಿದ್ದಾಪುರ: ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ವೀಕ್ಷಿಸಲು ಶಾಸಕ ಭೀಮಣ್ಣ ನಾಯ್ಕ ಸಕಲ ಸೌಲಭ್ಯ ಒದಗಿಸಿದರು.
ತಮ್ಮ ಮತ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ನಾಣಿಕಟ್ಟಾ, ಸರಕಾರಿ ಪದವಿ ಪೂರ್ವ ಕಾಲೇಜು ಹಾಳದಕಟ್ಟಾ ಹಾಗೂ ಶಿರಸಿ ತಾಲೂಕಿನ ಮಾರಿಕಾಂಬಾ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಕೊಳಗಿಬಿಸ್ ಕಾಲೇಜಿನ ವಿದ್ಯಾರ್ಥಿಗಳು ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನವನ್ನು ವೀಕ್ಷಿಸಲು ಸೋಮವಾರ ಆಗಮಿಸಿದ್ದು ಶಾಸಕ ಭೀಮಣ್ಣ ನಾಯ್ಕ ಸಕಲ ಸೌಲಭ್ಯ ಒದಗಿಸಿದರು.
ಬಳಿಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿಸಿ ಕಲಾಪ ವಿಷಯಗಳ ಕುರಿತು ಮಕ್ಕಳೊಂದಿಗೆ ಕೆಲಕಾಲ ಚರ್ಚಿಸಲಾಯಿತು. ಬಂದಂತಹ ಎಲ್ಲ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆಯನ್ನು ಮಾಡಲಾಯಿತು. ಅಧಿವೇಶನವನ್ನು ಕಣ್ತುಂಬಿಕೊಂಡ ಮಕ್ಕಳು ಸಂತಸ ವ್ಯಕ್ತಪಡಿಸಿದರು. ಎಲ್ಲಾ ಮಕ್ಕಳೊಂದಿಗೆ ಸುವರ್ಣಸೌಧದ ಮುಂಭಾಗದಲ್ಲಿ ಛಾಯಾಚಿತ್ರ ತೆಗೆಸಿಕೊಂಡರು.