ದಾಂಡೇಲಿ : 2024-25 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಧಾರ್ಮಿಕ ಪಠಣದಲ್ಲಿ ನಗರದ ಇ.ಎಂ.ಎಸ್ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಅಥರ್ವ ಗಣೇಶ ಹೆಗಡೆ ಪ್ರಥಮ ಸ್ಥಾನವನ್ನು ಪಡೆದು ತಾಲೂಕಿಗೆ ಕೀರ್ತಿಯನ್ನು ತಂದಿದ್ದಾನೆ.
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯು ಯಲ್ಲಾಪುರದಲ್ಲಿ ನಡೆದಿತ್ತು. ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಅಥರ್ವ ಜಿ.ಹೆಗಡೆ ಈತನು ಗಣೇಶ ಹೆಗಡೆ ಮತ್ತು ವಿಭಾ ಹೆಗಡೆ ಶಿಕ್ಷಕ ದಂಪತಿಗಳ ಸುಪುತ್ರನಾಗಿದ್ದಾನೆ. ಇನ್ನುಳಿದಂತೆ ಇದೇ ಶಾಲೆಯ 6 ನೇ ತರಗತಿ ವಿದ್ಯಾರ್ಥಿನಿ ಸೌಮ್ಯಾ ಎನ್. ಮೇಟಿ ಇವಳು ಕನ್ನಡ ಕಂಠಪಾಠದಲ್ಲಿ ತೃತೀಯ, 7 ನೇ ತರಗತಿಯ ವಿದ್ಯಾರ್ಥಿನಿ ಸೃಷ್ಟಿ ಎ. ಗೌಡ ಇವಳು ಕವನವಾಚನ ಹಾಗೂ 6 ನೇ ತರಗತಿಯ ಶ್ರೇಯಾ ಎಸ್. ಕುಂಬಾರ ಇವಳು ದೇಶ ಭಕ್ತಿಗೀತೆಯಲ್ಲಿ ಸಮಾಧಾನಕರ ಬಹುಮಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ.
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದ ಈ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕ/ಶಿಕ್ಷಕಿಯರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.