ಶಿರಸಿ: ಪುರಾತತ್ವ ಸಂಗ್ರಹಾಲಯಗಳು ಮತ್ತು ಮೈಸೂರಿನ ಪರಂಪರೆ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರ್ಥ ಇಲಾಖೆಗಳ ಆಶ್ರಯದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಉತ್ತರ ಕನ್ನಡ ಉಪ ನಿರ್ದೇಶಕರ ಕಾರ್ಯಲಯ ಶಿರಸಿ ಶೈಕ್ಷಣಿಕ ಜಿಲ್ಲಾ ಇಲಾಖೆಯು ನಗರದ ಸರ್ಕಾರಿ ಉರ್ದು ಪ್ರೌಢಶಾಲೆಯಯಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರಾಚ್ಯ ಪ್ರಜ್ಞೆ ಸ್ಪರ್ಧೆಯಲ್ಲಿ ನಗರದ ಶ್ರೀ ಮಾರಿಕಾಂಬಾ ಸರಕಾರಿ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿ.ಎನ್. ಸಾಧ್ವಿ ಭಾಷಣದಲ್ಲಿ , ಶ್ರೀರಕ್ಷಾ ಎಸ್. ಹೆಗಡೆ ಪ್ರಬಂಧ ಸ್ಪರ್ಧೆಯಲ್ಲಿ ಹಾಗೂ ಚೈತನ್ಯ ಹರಿತ್ಸಾ, ನಿಖಿತಾ ಎಲ್.ಜಿ. ರಸ ಪ್ರಶ್ನೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಭೀಮಣ್ಣ ನಾಯ್ಕ, ಉಪ ಪ್ರಾಚಾರ್ಯ ಆರ್.ವಿ.ನಾಯಕ, ಇತರ ಶಿಕ್ಷಕರು, ಶಿಕ್ಷಕೇತರ ಸಿಬಂದಿಗಳು ಅಭಿನಂದಿಸಿದ್ದಾರೆ.