ಬನವಾಸಿ: ಉತ್ತರ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ, ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಶಾಲಾ ಶತಮಾನೋತ್ಸವ ಆಚರಣಾ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮ-2024 ಕಾರ್ಯಕ್ರಮವು ಡಿ.21ರಂದು ಮುಂಜಾನೆ 9-30ಗಂಟೆಗೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ದಿ.ದ.ರಾ.ಭಟ್ ಗುರೂಜೀ ವೇದಿಕೆಯಲ್ಲಿ ಜರುಗಲಿದೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್.ವೈದ್ಯ ಉದ್ಘಾಟಿಸುವರು. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆಡಳಿತ ಸುಧಾರಣಾ ಅಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟಂಟ್ ಮತ್ತು ಏಜೆನ್ಸಿಸ್ ಅಧ್ಯಕ್ಷ ಸತೀಶ ಕೃಷ್ಣ ಸೈಲ್ ಉಪಸ್ಥಿತರಿರುವರು. ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಭೀಮಣ್ಣ ನಾಯ್ಕ್, ಎಸ್.ವಿ. ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಉಳ್ವೇಕರ್, ಗ್ರಾಪಂ ಅಧ್ಯಕ್ಷೆ ಬೀಬಿ ಆಯಿಷಾ ಖಾಸಿಂಖಾನ್, ಉಪಾಧ್ಯಕ್ಷ ಸಿದ್ದವೀರೇಶ ನರೇಗಲ್, ಎಸ್.ಡಿ.ಎಮ್.ಸಿ ಅಧ್ಯಕ್ಷ ಸುರೇಶ ಪಿ.ಕಬ್ಬೇರ, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಶಿವಾಜಿ ಕಾಳೇರಮನೆ ಆಗಮಿಸುವರು. ವಿಶೇಷ ಆಹ್ವಾನಿತರಾಗಿ ಶಿರಸಿ ಉಪವಿಭಾಗಧಿಕಾರಿ ಕಾವ್ಯರಾಣಿ, ಡಿ.ಡಿ.ಪಿ.ಐ ಪಿ.ಬಸವರಾಜ, ಡಿ.ವೈ.ಎಸ್.ಪಿ ಗಣೇಶ ಕೆ.ಎಲ್. ತಾಲ್ಲೂಕು ದಂಡಾಧಿಕಾರಿ ಶ್ರೀಧರ ಮುಂದಲಮನಿ, ತಾಪಂ ಕಾರ್ಯ ನಿರ್ವಹಣಾಧಿಕಾರಿ ಸತೀಶ ಹೆಗಡೆ, ಪ್ರಾಂಶುಪಾಲರ ಡಯಟ್ ಎಮ್.ಎಸ್.ಹೆಗಡೆ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ್, ಕ್ಷೇತ್ರ ಸಮನ್ವಯ ಅಧಿಕಾರ ದಿನೇಶ ಶೇಟ್ ಆಗಮಿಸುವರು ಎಂದು ಶಾಲಾ ಶತಮಾನೋತ್ಸವ ಆಚರಣಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.