• Slide
    Slide
    Slide
    previous arrow
    next arrow
  • ಜ್ಞಾನಪೀಠ ಪುರಸ್ಕೃತರು ಶಿಕ್ಷಣ ಪಡೆದ ಸರ್ಕಾರಿ ಶಾಲೆಗೆ 16.88 ಕೋಟಿ ರೂ. ಬಿಡುಗಡೆ

    300x250 AD

    ಬೆಂಗಳೂರು: ರಾಜ್ಯದ ಎಂಟು ಜ್ಞಾನಪೀಠ ಪುರಸ್ಕೃತರು ಶಿಕ್ಷಣ ಪಡೆದ 11 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಹಣ ಬಿಡುಗಡೆ ಮಾಡಿದೆ.

    16.88 ಕೋಟಿ ರೂ. ಗಳನ್ನು ಈ ಸಲುವಾಗಿ ಬಿಡುಗಡೆ ಮಾಡಲಾಗಿದೆ. ಹಾಗೆಯೇ ಈ ಶಾಲೆಗಳ ಸರ್ವತೋಮುಖ ಅಭಿವೃದ್ಧಿ ಹಿನ್ನೆಲೆಯಲ್ಲಿ ಕ್ರಿಯಾ ಯೋಜನೆಯನ್ನು ಸಹ ಸಿದ್ಧಪಡಿಸಲಾಗಿದೆ. ಇದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದಲೂ ಅನುಮೋದನೆ ದೊರೆತಿದೆ.

    300x250 AD

    ಈ ಯೋಜನೆಯನ್ನು ಆರು ತಿಂಗಳ ಕಾಲಮಿತಿಯಲ್ಲಿ ಅನುಷ್ಠಾನ ಮಾಡಲು ಸೂಚಿಸಲಾಗಿದೆ. ಶಾಲೆಗಳ ಪ್ರಯೋಗಾಲಯಗಳು, ಗ್ರಂಥಾಲಯ, ಶೌಚಾಲಯ, ಸ್ಮಾರ್ಟ್ ತರಗತಿಗಳು, ಪೀಠೋಪಕರಣ, ಕುಡಿಯುವ ನೀರು, ಕ್ರೀಡಾ ಸಾಮಗ್ರಿಗಳ, ಶಾಲೆಗಳಿಗೆ ಸುಣ್ಣ ಬಣ್ಣ ಬಳಿಯುವುದಕ್ಕೆ ಸಂಬಂಧಿಸಿದಂತೆ ಈ ಯೋಜನೆಯಲ್ಲಿ ಸೂಚಿಸಲಾಗಿದೆ. ಹಾಗೆಯೇ ಜ್ಞಾನಪೀಠ ಪುರಸ್ಕೃತರ ಗೌರವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಸರ್ಕಾರ ಅನುದಾನ ನೀಡಿದೆ.
    ನ್ಯೂಸ್ 13

    Share This
    300x250 AD
    300x250 AD
    300x250 AD
    Leaderboard Ad
    Back to top