ಕಾರವಾರ: ಉತ್ತರ ಕನ್ನಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 2 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ಪರೀಕ್ಷೆಯನ್ನು ನೆಡೆಸಲಾಗಿದ್ದು, ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಗಾಗಿ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಡಿ.20 ರಂದು ಉತ್ತರ ಕನ್ನಡ ಜಿಲ್ಲಾ ವೆಬ್‌ಸೈಟ್: https://uttarakannada.nic.in/ ನಲ್ಲಿ ಪ್ರಕಟಿಸಲಾಗಿದೆ.
ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳ ಪರಿಶೀಲನೆಯನ್ನು ಜನವರಿ 2 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಾಜರಾಗಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಉತ್ತರ ಕನ್ನಡ ಜಿಲ್ಲಾಧಿಕಾರಿಯವರ ಕಚೇರಿಯ ದೂರವಾಣಿ ಸಂಖ್ಯೆ: Tel:+9108382229857, Tel:+9108382222072ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.