ದಾಂಡೇಲಿ : ನಗರದ ಹಳಿಯಾಳ ರಸ್ತೆಯ 3ನಂ ಗೇಟ್ ಹತ್ತಿರದ ಜನವಸತಿ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಆತಂಕಗೊಳಿಸಿದ ಘಟನೆ ಶುಕ್ರವಾರ ನಸುಕಿನ ವೇಳೆ ನಡೆದಿದೆ.
ನಗರದ ಹಳಿಯಾಳ ರಸ್ತೆಯ 3ನಂ ಗೇಟ್ ಇಲ್ಲಿನ ಮದರಸದ ಹತ್ತಿರ ಜನವಸತಿ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ಮೊಸಳೆಯನ್ನು ನೋಡಿದ ತಕ್ಷಣ ಸ್ಥಳೀಯರು ಒಮ್ಮೆ ಆತಂಕಗೊಂಡಿದ್ದಾರೆ. ಕೆಲ ಹೊತ್ತು ಅಲ್ಲೇ ಇದ್ದ ಮೊಸಳೆ ಆನಂತರ ನದಿಗೆ ಹೋಗಿದೆ. ಈ ಬಗ್ಗೆ ಸ್ಥಳೀಯರಾದ ಅಕ್ಬರ್ ಹವಾಲ್ದಾರ ಮಾಧ್ಯಮಕ್ಕೆ ಮಾಹಿತಿಯನ್ನು ನೀಡಿದ್ದಾರೆ.
ನದಿ ತೀರದ ಜನರು ಈ ಬಗ್ಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.